Connect with us

    DAKSHINA KANNADA

    ‘ಸಾಗರ ಮಾಲಾ ಯೋಜನೆ ಮೀನುಗಾರರ ಭವಿಷ್ಯವನ್ನು ಕರಾಳಗೊಳಿಸುತ್ತಿದೆ’

    Published

    on

    ಮಂಗಳೂರು: ‘ಸಾಗರ ಮಾಲಾ ಯೋಜನೆ ಮೀನುಗಾರರ ಭವಿಷ್ಯವನ್ನು ಕರಾಳಗೊಳಿಸುತ್ತಿದೆ. ಮೀನುಗಾರಿಕಾ ಉದ್ಯಮವನ್ನು ಸಾಂಪ್ರದಾಯಿಕವಾಗಿ ಮೀನುಗಾರಿಕೆಯನ್ನೇ ಅವಲಂಬಿಸಿರುವ ಸಮುದಾಯಗಳಿಂದ ಕಿತ್ತುಕೊಂಡು, ಕಾರ್ಪೊರೇಟ್ ಕಂಪೆನಿಗಳ ಪಾಲಾಗಿಸುವ ಹುನ್ನಾರವನ್ನು ಹೊಂದಿದೆ ಎಂದು “ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ” ದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.


    ಮಂಗಳೂರಿನ ಬೆಂಗರೆಯಲ್ಲಿ ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆಯ ವಿರುದ್ದ “ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ” ಹಮ್ಮಿಕೊಂಡಿದ್ದ “ದೋಣಿಯೊಂದಿಗೆ ಮೀನುಗಾರರ ಪ್ರತಿಭಟನೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾಡಿದರು.
    ‘ಬೆಂಗರೆ ಪ್ರದೇಶದಲ್ಲಿ ಐನೂರಕ್ಕೂ ಹೆಚ್ಚು ನಾಡದೋಣಿಗಳಲ್ಲಿ ಸಾವಿರಕ್ಕೂ ಹೆಚ್ಚು ಜನ ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ ತೊಡಗಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಸಾಂಪ್ರದಾಯಿಕ ಮೀನುಗಾರಿಕೆಯನ್ನೇ ನಾಶಗೊಳಿಸುತ್ತಿದೆ.

    ಮೀನುಗಾರರು ನಾಡದೋಣಿ ಕಟ್ಟುವ ನದಿ ದಂಡೆಗಳನ್ನು ಆಕ್ರಮಿಸಿ ಅತಂತ್ರಗೊಳಿಸುತ್ತಿದೆ. ಇದರಿಂದ ಸಾಂಪ್ರದಾಯಿಕ ಮೀನುಗಾರಿಕೆಯನ್ನೇ ಅವಲಂಬಿಸಿರುವ ನೂರಾರು ಮೀನುಗಾರ ಕುಟುಂಬಗಳು ಬದುಕಿನ ನೆಲೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆಗೆ ಸಂಬಂಧಿಸಿ ಸ್ಥಳೀಯ ಜನರಿಗೆ ಮಾಹಿತಿಯನ್ನೇ ನೀಡದೆ ಜನರ ಮೇಲೆ ಹೇರಲಾಗಿದೆ. ಇನ್ನಷ್ಟು ಯೋಜನೆಗಳು ಬೆಂಗರೆಯ ನದಿ, ಸಮುದ್ರ ದಂಡೆಯಲ್ಲಿ ತರಲು ಸರಕಾರ ಪ್ರಸ್ತಾವನೆ ಸಿದ್ದಪಡಿಸಿಕೊಂಡಿದೆ. ಈ ಎಲ್ಲಾ ಸಂದರ್ಭದಲ್ಲಿ ಮೀನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ಗ್ರಾಮಸ್ಥರನ್ನು ಕತ್ತಲಲ್ಲಿ ಇಡಲಾಗಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಆರೋಪಿಸಿದ ಅವರು, ಇದರ ವಿರುದ್ದ ಮೀನುಗಾರಿಕಾ ವೃತ್ತಿ ನಿರತ ಜನರು ಜಾತಿ, ಧರ್ಮಗಳ ಭೇದ ಮರೆತು ಮೀನುಗಾರ ಸಮುದಾಯವಾಗಿ ಪ್ರತಿರೋಧ ಒಡ್ಡಬೇಕು ಎಂದು ಹೇಳಿದರು.

    ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ದೊರೆತ ನಂತರ ಬೆಂಗರೆ, ತಣ್ಣೀರು ಬಾವಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರು ಹಾಗೂ ಅವರ ಕುಟುಂಬಸ್ಥರು ತಮ್ಮ ದೋಣಿಗಳ ಮೇಲೆ, ಮನೆಗಳ ಮುಂಭಾಗ ತಮ್ಮ ಬೇಡಿಕೆಗಳ ಪ್ಲೇ ಕಾರ್ಡ್ ಹಿಡಿದು, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
    ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷ ಅಬ್ದುಲ್ ತಯ್ಯೂಬ್, ಸಲಹೆಗಾರ ನೌಷದ್ ಬೆಂಗರೆ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಹನೀಫ್ ಬೆಂಗರೆ, ತೌಸೀಫ್, ನಾಸಿರ್, ಖಲೀಲ್ ಬೆಂಗರೆ ಮೀನುಗಾರ ಮುಖಂಡರಾದ ಅನ್ವರ್ ಬೆಂಗರೆ, ಇಸ್ಮಾಯಿಲ್, ಸಾದಿಕ್, ಪಿ ಜಿ ರಫೀಕ್, ಇಬ್ರಾಹಿಂ ಖಲೀಲ್, ಫಯಾಜ್ ಬೆಂಗರೆ, ಅಜೀಜ್, ಸರ್ಫರಾಜ಼್ ಮತ್ತಿತರರು ವಹಿಸಿದ್ದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending