Thursday, December 2, 2021

ಉಡುಪಿ: ಗೋಕಳವು, ಗೋಹತ್ಯೆ ಖಂಡಿಸಿ ಹಿಂಜಾವೇ ಬೃಹತ್‌ ಪ್ರತಿಭಟನಾ ಜಾಥಾ

ಉಡುಪಿ: ಗಂಗೊಳ್ಳಿ ಆಸುಪಾಸಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗೋಹತ್ಯೆ, ಗೋಕಳವು ಪ್ರಕರಣವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಂದು ಗಂಗೊಳ್ಳಿಯಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.


ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಂಗೊಳ್ಳಿಯ ಮೀನುಗಾರಿಕಾ ಬಂದರುನಿಂದ ಹೊರಟಿರುವ 5000ಕ್ಕೂ ಅಧಿಕ ಜನರು ಗಂಗೊಳ್ಳಿಯ ಪ್ರಮುಖ ಬೀದಿಗಳ ಮೂಲಕ ಸಾಗಿ ಬಂದರು.

ಅಲ್ಲದೆ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದರು. ವಿಶೇಷವಾಗಿ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರು. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಆಗ್ರಹಿಸಿದರು.

ಶ್ರೀರಾಮ ಮಂದಿರದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರು ಬಿಗು ಬಂದೋಬಸ್ತ್‌ ಏರ್ಪಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...