Connect with us

  BELTHANGADY

  ಬೆಳ್ತಂಗಡಿಯಲ್ಲಿ ನಾರಾಯಣ ಗುರು ಪಠ್ಯ ಸೇರ್ಪಡೆಗಾಗಿ ಜು.4 ರಂದು ಪ್ರತಿಭಟನೆ

  Published

  on

  ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.


  ಪತ್ರಿಕಾಗೋಷ್ಠಿಯಲ್ಲಿ ಚಿದಾನಂದ ಎಳ್ದಕ್ಕ ಅಧ್ಯಕ್ಷರು ಬಿಲ್ಲವ ವೇದಿಕೆ ಬೆಳ್ತಂಗಡಿ, ಜಯವಿಕ್ರಮ್ ಕಳ್ಳಪು ಪ್ರಧಾನ ಕಾರ್ಯದರ್ಶಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಮತ್ತು ನಿತೀಶ್ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದು ಮಾತನಾಡಿ ‘ಬಸವಣ್ಣ, ಡಾ ಬಿ. ಆರ್ ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.

  ಆದರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು 10 ನೇ ತರಗತಿಯ ಪಠ್ಯದಲ್ಲಿ ಮರು ಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸುಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸರಕಾರ ಇದುವರೆಗೆ ಸ್ಪಂದಿಸಿಲ್ಲ. ಸರಕಾರದಲ್ಲಿ ನಮ್ಮ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಮಾತನಾಡಿ ಸರಿಪಡಿಸದೇ ಇರುವುದು ನಮಗೆ ನೋವು ತಂದಿದೆ.

  ನಾರಾಯಣ ಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ (ಐಚ್ಚಿಕ) ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರಕಾರ ಮತ್ತು ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೆಲ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಈ ರೀತಿ ಹಿಂಬಡ್ತಿ ನೀಡಿರುವ ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಪ್ರಶ್ನಿಸುವ ಧೈರ್ಯ ಅವರುಗಳಿಗೆ ಯಾಕಿಲ್ಲ? ಕನ್ನಡ ಭಾಷಾ ಪಠ್ಯವನ್ನು ಶೇಖಡಾ 20% ರಷ್ಟು ವಿದ್ಯಾರ್ಥಿಗಳ ಮಾತ್ರ ಓದುತ್ತಾರೆ.

  ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತು ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರಕಾರ ಯಾಕೆ ಚಿಂತನೆ ಮಾಡುತ್ತಿಲ್ಲ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.

  ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸದ ಗುರುಗಳಿಗೆ ಮತ್ತು ಅವರ ಅನುಯಾಯಿಗಳಿಗೆ ಅವಮಾನ ಮಾಡಿರುವ ರಾಜ್ಯ ಸರಕಾರದ ಹಠಮಾರಿ ಧೋರಣೆಯ ವಿರುದ್ಧ ಜುಲೈ 4ರಂದು  ನಮ್ಮ ಸಂಘದ ವತಿಯಿಂದ ಬೆಳ್ತಂಗಡಿ ಬಸ್ಸು ತಂಗುದಾಣದಲ್ಲಿ ಬೆಳಗ್ಗೆ 10.30 ಕ್ಕೆ ಸರಿಯಾಗಿ ಬೃಹತ್‌ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

   

  BELTHANGADY

  ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ..! ಬಿಜೆಪಿ ಮುಖಂಡ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

  Published

  on

  ಬೆಳ್ತಂಗಡಿ:  ಗಲಾಟೆ ವೇಳೆ ಅಪ್ರಾಪ್ತೆ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ್ದಾನೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಮುಂದೆ ಓದಿ..; ಬೈಕ್ – ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃ*ತ್ಯು
  ಬೆಳ್ತಂಗಡಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  Continue Reading

  BANTWAL

  ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ

  Published

  on

  ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.

  ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ.

  ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.

  ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.

  Continue Reading

  BANTWAL

  ಬೆಳ್ತಂಗಡಿ:ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

  Published

  on

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ.

  ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

  ಇದನ್ನು ಓದಿ: ‘ಹೊಡಿಬೇಡಿ ಪ್ಲೀಸ್’ ಎಂದು ಅಂಗಲಾಚಿದ ಕೆಜಿಎಫ್ ನಟಿ; ಕುಡಿದ ಮತ್ತಿನಲ್ಲಿ ನಡೀತಾ ಗಲಾಟೆ? ವೀಡಿಯೋ ವೈರಲ್

  Continue Reading

  LATEST NEWS

  Trending