ಢಾಕಾ : ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಭೇಟಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಬಾಂಗ್ಲಾ ದೇಶದ ಚಿತ್ತಗಾಂಗ್ ನಗರದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.
ಬಾಂಗ್ಲಾದೇಶದ ಸಂಸ್ಥಾಪಕ ಹಾಗೂ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ ದ ಸ್ವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೋದಿ ಅವರು ಬಾಂಗ್ಲಾದೇಶಕ್ಕೆ ತೆರಳಿದ್ದರು.
ಪ್ರಧಾನಿ ಮೋದಿ ಭೇಟಿ ವಿರೋಧಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ನಾವು ರಬ್ಬರ್, ಬುಲೆಟ್ ಹಾಗೂ ಟಿಯರ್ ಗ್ಯಾಸ್ ಬಳಕೆ ಮಾಡಿದ್ದಾರೆ.
ಈ ವೇಳೆ ನಾಲ್ವರು ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚುಉ ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.