LATEST NEWS
PSI ನೇಮಕಾತಿ ಹಗರಣ: ಆರೋಪಿ ಪೌಲ್ರನ್ನು ಯಾಕೆ ಕೋರ್ಟ್ಗೆ ಹಾಜರುಪಡಿಸಿ ಯಾಕೆ ಹೇಳಿಕೆ ದಾಖಲಿಸಿಲ್ಲ-ಹೈಕೋರ್ಟ್ ಗರಂ
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿ ಹತ್ತು ದಿನಗಳಾಗಿದ್ದರೂ ಅವರನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಅವರ ಹೇಳಿಕೆ ದಾಖಲು ಮಾಡಲಾಗಿಲ್ಲ.
ಎಡಿಜಿಪಿಯನ್ನು ಕೆಳಗಿನ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದೀರಿ. ಇದು ತನಿಖಾಧಿಕಾರಿಗಳಲ್ಲಿ ಆತಂಕ ಮೂಡಿಸುವುದಿಲ್ಲವೇ? ಎಂದು ಖಾರವಾಗಿಯೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಿಎಸ್ಐ ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ಆರೋಪಿಗಳಾದ ಸಿ.ಎನ್ ಶಶಿಧರ್ ಮತ್ತಿತರರು ಸಲ್ಲಿಸಿರುವ ಜಾಮೀನು ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಸಿಐಡಿಯನ್ನು ಪ್ರತಿನಿಧಿಸಿದ್ದ ವಕೀಲರು “ಪಿಎಸ್ಐ ನೇಮಕಾತಿ ಪ್ರಕರಣವು ಒಂದು ಹಗರಣ. ಈ ಪಿತೂರಿಯಲ್ಲಿ ಹಲವರು ಭಾಗಿಯಾಗಿದ್ದಾರೆ. ಸಿಐಡಿಯ ಪೊಲೀಸ್ ಮಹಾನಿರ್ದೇಶಕರು ತನಿಖೆಯ ಮೇಲೆ ನಿಗಾ ಇಟ್ಟಿರುವುದರಿಂದ ತನಿಖೆಯ ಬಗ್ಗೆ ಅನುಮಾನಪಡಬೇಕಿಲ್ಲ. ಕಳೆದ ಬಾರಿ ಸಿಐಡಿ ಡಿ ಜಿ ಅವರು ಮುಚ್ಚಿದ ಲಕೋಟೆಯಲ್ಲಿ ಸ್ಥಿತಿಗತಿ ವರದಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು” ಎಂದರು.
“ಇದೊಂದು ಹಗರಣವಾಗಿರುವುದಕ್ಕಾಗಿಯೇ ಬಂಧಿತ ಎಡಿಜಿಪಿಯನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿ ಅವರ ಹೇಳಿಕೆಯನ್ನು ದಾಖಲಿಸುವ ಕೆಲಸ ಮಾಡಿಲ್ಲ.
ಬಂಧಿತ ಎಡಿಜಿಪಿಯನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿ ಹೇಳಿಕೆಯನ್ನು ಯಾವಾಗ ದಾಖಲಿಸುತ್ತೀರಿ? ಕಳೆದ ಹತ್ತು ದಿನಗಳಲ್ಲಿ ನೀವು ಏನನ್ನೂ ಮಾಡಿಲ್ಲ.
ನಿನ್ನೆ ಮ್ಯಾಜಿಸ್ಟ್ರೇಟ್ ಮುಂದೆ ಎಡಿಜಿಪಿ ಹಾಜರುಪಡಿಸಿ, ಐದು ದಿನ ವಶಕ್ಕೆ ಕೇಳಿದ್ದೀರಿ. ಮ್ಯಾಜಿಸ್ಟ್ರೇಟ್ ಅವರು ಮೂರು ದಿನ ವಶಕ್ಕೆ ನೀಡಿದ್ದಾರೆ. ಇದು ನೀವು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದೀರಿ ಎಂದು ತೋರಿಸುತ್ತದೆಯೇ?
ಪ್ರಕರಣದಲ್ಲಿ ಏನೂ ಪ್ರಗತಿಯಾಗಿಲ್ಲವಾದ್ದರಿಂದ ಡಿಜಿ ಸಿಐಡಿಯನ್ನು ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಾಲಯ ಹೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.
“ಅಮೃತ್ ಪೌಲ್ ಬಂಧನದ ಬಳಿಕ ಪ್ರಕರಣದಲ್ಲಿ ಯಾವ ರೀತಿಯ ಪ್ರಗತಿಯಾಗಿದೆ” ಎಂಬ ಪ್ರಶ್ನೆಗೆ ಸರ್ಕಾರದ ವಕೀಲರು “ಎಡಿಜಿಪಿ ಮನೆಯಲ್ಲಿ ಶೋಧನೆ ನಡೆಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ. ಪೌಲ್ ಅವರ ಬ್ಯಾಂಕ್ ಖಾತೆಯನ್ನು ಜಫ್ತಿ ಮಾಡಲಾಗಿದೆ. ಎಡಿಜಿಪಿ ಮನೆಯಲ್ಲಿ ಶೋಧ ನಡೆಸಲಾಗಿದೆ.
ಅವರ ಸಹಾಯಕರ ಮನೆಯಲ್ಲೂ ಶೋಧ ನಡೆಸಿದ್ದೇವೆ. ಈ ದಾಖಲೆಗಳು ಮತ್ತು ಕರೆಗಳ ಪರಿಶೀಲನೆ (ಸಿಡಿಆರ್) ನಡೆಯುತ್ತಿದೆ. ಇದನ್ನು ಪರಿಶೀಲಿಸಲಾಗುತ್ತಿದೆ” ಎಂದು ವಿವರಿಸಿದರು.
ಪೌಲ್ ಅವರ ಫೋನ್ ವಶಕ್ಕೆ ಪಡೆದ ಮೇಲೆ ಏನು ಮಾಡಿದ್ದೀರಿ. ಎಡಿಜಿಪಿ ಶ್ರೇಣಿಯ ಕೆಳಗಿನ ಅಧಿಕಾರಿಗಳಿಂದ ತನಿಖೆ ನಡೆಸಿದ್ದೀರಿ.
ಇದು ತನಿಖಾಧಿಕಾರಿಗಳಲ್ಲಿ ಆತಂಕ ಮೂಡಿಸುವುದಿಲ್ಲವೇ? ಒಂದೊಮ್ಮೆ ಬಂಧಿತ ಎಡಿಜಿಪಿಗೆ ಕ್ಲೀನ್ ಚಿಟ್ ನೀಡಿದರೆ ಅವರ ಕೆಳಗಿನ ಅಧಿಕಾರಿಗಳಿಗೆ ಆತಂಕ ಮೂಡುವುದಿಲ್ಲವೇ?” ಎಂದು ಪ್ರಶ್ನೆ ಹಾಕಿತು.
“ಆ ರೀತಿ ಆಗಲು ಸಾಧ್ಯವೇ ಇಲ್ಲ. ನ್ಯಾಯಾಲಯದ ನಿರ್ದೇಶನದಂತೆ ಸಿಐಡಿಯ ಡಿ ಜಿ ತನಿಖೆಯ ಮೇಲೆ ನಿಗಾ ಇಟ್ಟಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯೂ ನ್ಯಾಯಾಲಯದ ಮುಂದೆ ಇದ್ದು,
ತನಿಖೆಯ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ, ಯಾರೂ ಪ್ರಭಾವ ಬೀರಲಾಗದು ಎಂಬ ಭರವಸೆಯನ್ನು ನಾನು ನ್ಯಾಯಾಲಯಕ್ಕೆ ನೀಡುತ್ತೇನೆ” ಎಂದು ಸರ್ಕಾರದ ವಕೀಲರು ಹೇಳಿದರು.
FILM
‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.
ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :
ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.
ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.
ಏನಂದ್ರು ಡಿಬಾಸ್?
ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.
ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?
ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.
BELTHANGADY
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.
ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
DAKSHINA KANNADA
ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು
ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.
ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.
ಎಲ್ಲೆಲ್ಲಿ ತೆರೆಗೆ?
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.
ನೈಜಘಟನೆಯಾಧಾರಿತ ಚಿತ್ರ :
‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
ತಾರಾಂಗಣ :
ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.
ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- BANTWAL7 days ago
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!