Connect with us

DAKSHINA KANNADA

ಮಂಗಳೂರು: SKSSFನಿಂದ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ

Published

on

ಮಂಗಳೂರು: ಮಾದಕ ವ್ಯಸನದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್‌ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಜನಜಾಗೃತಿ ರ್ಯಾಲಿ ನಡೆಯಿತು.


ಈ ವೇಳೆ ರ್ಯಾಲಿಯನ್ನು ಉದ್ದೇಶಿಸಿ ಕಲ್ಲಗುಂಡಿ ಜುಮ್ಮಾ ಮಸೀದಿಯ ಖತೀಬ್ ನಹೀಂ ಫೈಝೀ ಅವರು ಮಾತನಾಡಿ ಇಂದಿನ ಜನಾಂಗ ಧೂಮಪಾನ, ಮದ್ಯಪಾನ, ಗಾಂಜ ಇತ್ಯಾದಿ ಅಮಲ ಪದಾರ್ಥಗಳ ವಿರುದ್ದ ಹೋರಾಡಬೇಕು.

ಜೊತೆಗೆ ಸಮಾಜ ಸೇವೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಎಸ್ಕೆಎಸ್ಸೆಸ್ಸೆಫ್ ಪ್ರಮುಖರು, ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending