Connect with us

DAKSHINA KANNADA

“ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ”

Published

on

ಮಂಗಳೂರು :  ಪ್ರತಿ ವರ್ಷ ಕ್ಷಯರೋಗದಿಂದ ಮೃತ ಪಡುವವರ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗಿ ಕ್ಷಯರೋಗದ ಬಗ್ಗೆ ಎಚ್ಚರ ವಹಿಸುವಂತೆ ಅರೋಗ್ಯ ಇಲಾಖೆ ಸೂಚನೆ ನೀಡಿದೆ ಮಾ 24 ವಿಶ್ವ ಕ್ಷಯರೋಗ ದಿನವಾಗಿದೆ. ಪ್ರತಿ ವರ್ಷದಿಂದ ವರ್ಷಕ್ಕೆ ಕ್ಷಯರೋಗ ಉಲ್ಬಣಿಸುತ್ತಿದೆ.

ನಮ್ಮ ದೇಶದಲ್ಲಿ ಕ್ಷಯರೋಗವನ್ನು ಸರಿಯಾಗಿ ಪತ್ತೆ ಮಾಡುವುದು ಹಾಗು ಸೂಕ್ತ ಚಿಕಿಸ್ಸೆ ನೀಡುವುದು ಇಂದಿಗೂ ಸಹ ಧೊಡ್ದ ಸವಾಲಾಗಿಯೇ ಉಳಿದಿದೆ ರೋಗಕಾರಕ ಕ್ರಿಮಿ Mycobacterium Tuberculosis ಬಗ್ಗೆ ಸರಿಸುಮಾರು 135 ವರ್ಷಗಳಿಂದ ಅರಿವಿದ್ದರೂ. ಕಳೆದ 40 ವರ್ಷಗಳಿಂದ ಚಿಕಿಸ್ಸೆ ಬೇಕಾದ ಸೂಕ್ತ ಔಷಧಗಳು ಎಲ್ಲೆಡೆ ಲಭ್ಯವಿದ್ದರೂ ಇಂದಿಗೂ ಪ್ರತಿ ವರ್ಷ ನಮ್ಮ ದೇಶದಲ್ಲಿ ಸುಮಾರು 28 ಲಕ್ಷ ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದರೆ.

ಇವರಲ್ಲಿ 20-25% ರೋಗಿಗಳು ಔಷಧ ನಿರೋಧಕ ಕ್ಷಯರೋಗ ಹೊಂದಿದವರಾಗಿದ್ದರೆ. ಹಾಗು ಪ್ರತಿ ವರ್ಷ 4.5 ಲಕ್ಷ ರೋಗಿಗಳು ಈ ಕಾಯಿಲೆಯಿಂದ ಸಾವನ್ನಪುತಿದ್ದ್ಧಾರೆ.

ಇದಕ್ಕೆ ಮುಖ್ಯವಾಗಿ ಸೂಕ್ತ ರೋಗ ಪತ್ತೆ ವಿಧಾನಗಳು ಎಲ್ಲೆಡೆ ಲಭ್ಯವಿಲದೇ ಇರುವುದು, ಕೆಲವು ರೋಗಿಗಳು ಪೂರ್ತಿ ಕಾಲ (ಸರಿ ಸುಮಾರು 6 ತಿಂಗಳಿಂದ 8 ತಿಂಗಳು) ಪೂರ್ತಿ ಚಿಕಿಸ್ಸೆಯನ್ನು ತೆಗೆದುಕೊಳ್ಳದೇ ಇರುವುದು ಕೆಲ ಕಾರಣಗಳಾಗಿವೆ.

ಈ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ದೇಶಾಧ್ಯಂತ ಒಂದು ತೆರೆನಾದ ರೋಗ ಪತ್ತೆ ಹಾಗು ಪರಿಣಾಮಕಾರಿ ಚಿಕಿಸ್ಸೆ ನೀಡಲು ಹೊಸ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ.

“ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ” ಅದೇ ಪ್ರಕಾರ ಕ್ಷಯರೋಗಕ್ಕೆ ಚಿಕಿಸ್ಸೆ ನೀಡುವ ಪ್ರತೀ ವರ್ಗದ ರೋಗ ಪತ್ತೆ ಮತ್ತು ಚಿಕಿಸ್ಸೆ ಬಿಡುಗಡೆಗೆ ಈ ಮಾರ್ಗಧರ್ಶಿ ಪ್ರಕಾರ ರೋಗ ಪತ್ತೆಗಾಗಿ ರೋಗವನ್ನು 3 ಮುಖ್ಯ ವಿಧಗಳಾಗಿ ವಿಂಗಡಿಸಿದೆ.

ಅವುಗಳೆಂದರೆ:

ಶಾಸ್ವಕೋಶದ ಕ್ಷಯ – Pulmonary TB
ಶಾಸ್ವಕೋಶೇತರ ಕ್ಷಯರೋಗ – Extra Pulmonary
ಔಷಧ ನಿರೋಧಕ ಕ್ಷಯರೋಗ – Drug Resistant TB

ಚಿಕಿತ್ಸೆ ವಿಭಾಗದಲ್ಲಿ ಇತೀಚಿನ ವಿಧಾನಗಳನ್ನು ಸೇರ್ಪಡಿಸಲಾಗಿದೆ. ವ್ಯಕಿಗಳು ಹಾಗು ಸಣ್ಣ ಮಕ್ಕಳು ಕ್ಷಯರೋಗದ ಲಕ್ಷಣಗಳಿಂದ ಬಳಲುತ್ತಿದ್ದರೆ CBNAAT ಎನ್ನುವ ಆಧುನಿಕ ಪರೀಕ್ಷಾ ವಿಧಾನದಿಂದ ಕಾಯಿಲೆಯ ಮೊದಲಿನ ಹಂತದಲ್ಲಿ ಯೇ ಪತ್ತೆ ಹಚ್ಚಬಹುದಾಗಿದೆ ಇದು ಅತೀ ಸೂಕ್ಷವಾದ Genotypic ವಿಧಾನವಾಗಿದ್ದು ಈಗ ದೇಶಧಾಧ್ಯಂತ ಪ್ರತೀ ಜಿಲ್ಲಾ ಕೇಂದ್ರ ಆಸ್ಪತ್ರೆಗಳಲ್ಲೂ ಉಚಿತವಾಗಿ ರೋಗ ಪತ್ತೆಗೆ ಬಳಸಿಕೊಳ್ಳಬಹುದಾಗಿದೆ.

ಈ ನಿಟ್ಟಿನಲ್ಲಿ  Department of Pediatrics AJ Institute of Medical Sciences & AJ Hospital & Research Centre ಹಾಗು NTEP ಮುಖ್ಯಸ್ಥರು ಜೊತೆಗೂಡಿ “ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ” (NTEP) ಶಿಬಿರವನ್ನು ಮಾ 13 ಶನಿವಾರದಂದು ಹಮ್ಮಿಕೊಂಡಿದ್ದು ಅತಿಥಿಗಳಾಗಿ

Dr. Ashok Hegde Dean AJIMS
Dr. Prashanth Marla – Medical Director, AJHRC
Dr. Amitha P Marla – Director Hospital Administration
Dr. Murali Krishna RV – President of IAP,DK 2021
Dr. Sumitha Nayak – Co-Ordinator, Bangalore
Dr. Shreekrishna G.N – Secretary of IAP DK Branch 2021
Dr. Santhosh T Soans- IAP President 2018 ,HOD, Dept of Paediatrics, AJIMS.

ಆಗಮಿಸಿದ್ಹರು.

 

DAKSHINA KANNADA

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

Published

on

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.

ಇದನ್ನೂ ಓದಿ : ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್

ತಂಡಕ್ಕೆ ದೈಹಿಕ ಶಿಕ್ಷಕರಾದ  ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ವೆನ್ಲಾಕ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ; ಸಾ*ವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ಮಹಿಳೆ

Published

on

ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ  ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು.

ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು  ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು.

ಶಿವಮೊಗ್ಗ ರಾಗಿಗುಡ್ಡ ನಿವಾಸಿ,  ರೇಖಾ (41) ಅಂಗಾಂಗ ದಾನ ಮಾಡಿರುವ ಮಹಿಳೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೇಖಾ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಜ.6 ರಂದು ದಾಖಲಿಸಲಾಗಿತ್ತು. ಆದರೆ, ಬ್ರೈನ್ ಡೆಡ್ ಆದ ಹಿನ್ನೆಲೆ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.

ಇದನ್ನೂ ಓದಿ : ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶ*ವ ಪತ್ತೆ!

ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿರೋದು ವಿಶೇಷ.

Continue Reading

DAKSHINA KANNADA

ಮಂಗಳೂರು : ತಣ್ಣೀರು ಬಾವಿ ಬೀಚ್ ಪ್ರವಾಸಿಗರಿಗೆ ವಿಶೇಷ ಸೌಲಭ್ಯಗಳು

Published

on

ಮಂಗಳೂರು : ನಗರದ ತಣ್ಣೀರು ಬಾವಿ ಬೀಚ್‌ ಅಭಿವೃದ್ಧಿ ಕೆಲಸಗಳು ‘ಒನ್ ನೇಷನ್ ಒನ್ ಡೆಸ್ಟಿನೇಷನ್’ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ತಣ್ಣೀರು ಬಾವಿ ಬೀಚ್‌ನಲ್ಲಿ 7.59 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗೆ ನೀಡಿತ್ತು. ಅಂತೆಯೇ ಪುಣೆ ಮೂಲದ ಬಿವಿಜಿ ಇಂಡಿಯಾ ಲಿಮಿಟೆಡ್‌ ಎಂಬ ಕಂಪನಿಯು 7.56 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು, ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಹಿಲನ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಲಭ್ಯವಿರುವ ಸೌಲಭ್ಯಗಳ ಪಟ್ಟಿ :

ತಣ್ಣೀರು ಬಾವಿ ಬೀಚ್‌ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಬೀಚ್‌ಗೆ ಬರುವ ಪ್ರವಾಸಿಗರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗದಿ ಮಾಡುವ ಪ್ರವೇಶ ಶುಲ್ಕವನ್ನು ವಸೂಲಿ ಮಾಡುವ ಅವಕಾಶವನ್ನು ಟೆಂಡರ್ ಪಡೆದವರಿಗೆ ನೀಡಲಾಗುತ್ತದೆ. ಸದ್ಯ ಬೀಚ್ ನಿರ್ವಹಣೆ ಮಾಡುವ ಗುತ್ತಿಗೆ ಅವಧಿ ಅಂತ್ಯವಾಗಿದೆ. ಆದ್ದರಿಂದ ಹೊಸ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಷ್ಟು ದಿನ ತಣ್ಣೀರು ಬಾವಿ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಮರ ಗಿಡಗಳ ಉದ್ಯಾನವನ ಪ್ರಮುಖ ಆಕರ್ಷಣೆಯಾಗಿತ್ತು. ಸಸಿಹಿತ್ಲು, ಪಣಂಬೂರು ಬೀಚ್‌ಗೆ ಹೋಲಿಕೆ ಮಾಡಿದರೆ ಇಲ್ಲಿ ಹೆಚ್ಚಿನ ಆಕರ್ಷಣೆಗಳು, ಸೌಲಭ್ಯಗಳು ಇಲ್ಲ ಎಂಬ ಆರೋಪವಿತ್ತು. ಆದ್ದರಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಬೇಕಾದ ಸೌಲಭ್ಯಗಳನ್ನು ಕೈಗೊಳ್ಳಲಾಗಿದೆ.

ಬೀಚ್ ಆವರಣದಲ್ಲಿ ಆಹಾರ ಮಳಿಗೆಗಳು, ಸಮುದ್ರ ವೀಕ್ಷಣೆ ಮಾಡಲು ಫ್ರೇಮ್ ಮುಂತಾದ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಾಡಲಾಗುತ್ತಿದೆ. ಬೀಚ್‌ನಲ್ಲಿ ಬಿದಿರು ಮನೆಗಳು ನಿರ್ಮಾಣವಾಗಿದ್ದು, ಪ್ರವಾಸಿಗರಿಗೆ ವಿಶೇಷ ಅನುಭವವನ್ನು ನೀಡಲಿವೆ. ಬೀಚ್‌ನಲ್ಲಿ ಹುಲ್ಲಿನ ಕೊಡೆಗಳ ಕೆಳಗೆ ಕುಳಿತು ಸಮುದ್ರ ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಬೀಚ್ ಕಸ ನಿರ್ವಹಣೆಗೆ ಘನತ್ಯಾಜ್ಯ ನಿರ್ವಹಣೆ ಘಟಕ, ಶೌಚಾಲಯಗಳ ನಿರ್ವಹಣೆ, ಬಟ್ಟೆ ಬದಲಾಯಿಸುವ ಕೊಠಡಿ, ಬಿದಿರಿನ ತಾತ್ಕಾಲಿಕ ಮನೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬೀಚ್‌ನಲ್ಲಿ ಒದಗಿಸಲಾಗಿದೆ. ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಚಿಕಿತ್ಸೆ ಕೊಠಡಿ, ಸಿಸಿಟಿವಿ ಕ್ಯಾಮರಾ ನಿಯಂತ್ರಣ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಬೀಚ್ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Continue Reading

LATEST NEWS

Trending

Exit mobile version