DAKSHINA KANNADA
ವೀಕೆಂಡ್ ಕರ್ಫ್ಯೂಗೆ ಕಡಬದಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ: ಪೇಟೆಯಲ್ಲಿ ಕಂಡು ಬಂದ ಭಾರೀ ಜನಜಂಗುಳಿ
ಕಡಬ: ಏರುಗತಿಯಲ್ಲಿ ಹೆಚ್ಚಳವಾಗುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿತ್ತು. ಭಾನುವಾರ ಮತ್ತು ಶನಿವಾರದ ವೀಕೆಂಡ್ ಕರ್ಫ್ಯೂಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಆದ್ರೆ ಇತ್ತ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ಕಡಬದ ಜನತೆ ಜನರು ಕೊರೊನಾ ಗೈಡ್ ಲೈನ್ ಮೀರುವುದರ ಮೂಲಕ ಉದ್ಧಟತನ ತೋರುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ಇಂದು ಭಾರೀ ಜನಜಂಗುಳಿ ಕಂಡು ಬಂತು.ಸಾಮಾಜಿಕ ಅಂತರ ಕೂಡ ಕಂಡು ಬರಲಿಲ್ಲ.ಮಾಸ್ಕ್ ಗಳನ್ನು ಹಾಕಿರಲಿಲ್ಲ.ಸಾರ್ವಜನಿಕರು ಪೊಲೀಸರ ಕೋವಿಡ್ ಟಾಸ್ಕ್ ಫೋರ್ಸ್ ಮನವಿಗೆ ಸ್ಪಂದನೆ ನೀಡಲಿಲ್ಲ. ಒಟ್ಟಾರೆಯಾಗಿ ಕೊರೊನಾ ತಡೆಗೆ ಸರಕಾರ ಹಾಕಿದ ವೀಕೆಂಡ್ ಕರ್ಫ್ಯೂ ವ್ಯರ್ಥವಾಗಿದೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.