Wednesday, December 1, 2021

ಕಾರ್ಕಳ: ಕಲ್ಲು ಗಣಿಗಾರಿಕೆ ಲೈಸನ್ಸ್‌ ರದ್ದುಪಡಿಸುವಂತೆ ಶಿವಪುರ ಗ್ರಾಮಸ್ಥರಿಂದ ಪಿಐಎಲ್‌

ಮಂಗಳೂರು: ಮನೆ ಸಮೀಪದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಅದ್ದರಿಂದ ತೀವ್ರ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಗಣಿಗಾರಿಕೆಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿ ಕಾರ್ಕಳದ ಉಪ್ಪರಿಗೆ ಮನೆ ಹಾಗೂ ಶಿವಪುರ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ.


ಸ್ಥಳೀಯರಾದ ಭೋಜಶೆಟ್ಟಿ ಹಾಗೂ ಇತರರು ಸಲ್ಲಿಸಿರುವ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ಸಚಿನ್ ಶಂಕರ್ ಮಗದಂ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ವಿಕ್ರಂ ಹುಯಿಲ್ಗೋಳ್ ವಾದ ಮಂಡಿಸಿ, ಕ್ರಷರ್‌ ಮಾಲೀಕರು ಕರ್ನಾಟಕ ಕಲ್ಲು ಗಣಿಗಾರಿಕೆ ನಿಯಂತ್ರಣ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ.

ಇದರಿಂದ ಸುತ್ತಮುತ್ತಲ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಗಣಿಗಾರಿಕೆಯಿಂದ ಏಳುತ್ತಿರುವ ಧೂಳಿನಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ.

ಸಾಕಷ್ಟು ಸಮಯದಿಂದಲೂ ಈ ಸಮಸ್ಯೆ ಇದ್ದು, ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಹಿಂದೆ ನಿಯಮ ಉಲ್ಲಂಘಿಸಿದ ಆರೋಪವಿದ್ದರೂ ಗಣಿಗಾರಿಕೆ ಲೈಸೆನ್ಸ್ ನವೀಕರಿಸಿಕೊಟ್ಟಿದ್ದಾರೆ. ಹೀಗಾಗಿ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿದರು.
ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ ವಿಚಾರಣೆ ನಡೆಸೋಣ ಎಂದು ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...