Home ಪ್ರಮುಖ ಸುದ್ದಿ  ಪಿ.ಯು.ಸಿ ಪರೀಕ್ಷೆ - ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್

 ಪಿ.ಯು.ಸಿ ಪರೀಕ್ಷೆ – ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್

 ಪಿ.ಯು.ಸಿ ಪರೀಕ್ಷೆ – ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್

ಮಂಗಳೂರು : ಮಾರ್ಚ್ 4 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು.ಸಿ. ಪರೀಕ್ಷೆಗಳು ನಡೆಯಲಿದ್ದು,  ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ಹೊರಡಿಸಿರುತ್ತಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಮಾಹಿತಿಗಳನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸನ್ನೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್, ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ, ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ದ.ಕ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisment -

RECENT NEWS

ತಾಯಿಯ ಬಿಸಿಯಪ್ಪುಗೆಯಲ್ಲಿ ಕೊರೊನಾ ವಿರುದ್ದ ಹೋರಾಡುತ್ತಿದೆ ಹಸುಗೂಸು..!

ತಾಯಿಯ ಬಿಸಿಯಪ್ಪುಗೆಯಲ್ಲಿ ಕೊರೊನಾ ವಿರುದ್ದ ಹೋರಾಡುತ್ತಿದೆ ಹಸುಗೂಸು..! ಮಂಗಳೂರು: ವಿಶ್ವದಲ್ಲಿ ಡೆಡ್ಲಿ ಕೊರೋನಾ ತಾಂಡವವಾಡ್ತಿದೆ. ಈ ವೈರಸ್ ಜಾತಿ, ಧರ್ಮ, ಸಂಬಂಧ, ಸ್ನೇಹ ಎಲ್ಲವನ್ನು ಮೀರಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ತಮ್ಮ ಆತ್ಮೀಯರ ಜೊತೆಯೂ...

ದ.ಕ. ಮೂರು ಕೊರೋನಾ ಸೋಂಕು ಧೃಡ : ದೆಹಲಿ ಸಮಾವೇಶದ ಇಬ್ಬರು ಮತ್ತೋರ್ವ ಮಹಿಳೆಯಲ್ಲಿ ವೈರಸ್ ಪತ್ತೆ

ದ.ಕ. ಮೂರು ಕೊರೋನಾ ಸೋಂಕು ಧೃಡ :ದೆಹಲಿ ಸಮಾವೇಶದ ಇಬ್ಬರು ಮತ್ತೋರ್ವ ಮಹಿಳೆಯಲ್ಲಿ ವೈರಸ್ ಪತ್ತೆ ಮಂಗಳೂರು : ಕಳೆದ ಕೆಲ ದಿನಗಳಿಂದ ಹೊಸ ಪಾಸಿಟಿವ್ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿರದ...

ಲಾಕ್ ಡೌನ್ ತುರ್ತುಪರಿಸ್ಥಿತಿಯ ಹೇರಿಕೆಯಾ, ಕೊರೊನಾಗೆ ಜಾರಿ ಮಾಡಿರುವ ನಿಯಮ ಅಮಾನವೀಯವಾಯಿತೇ.?

ಲಾಕ್ ಡೌನ್ ಹೆಸರಿನಲ್ಲಿ ಅಮಾನವೀಯತೆ: ಅಗತ್ಯ ವಸ್ತು ಖರೀದಿಸುವವರ ಗಾಡಿ ಕೂಡ ಸೀಜ್ ಮಂಗಳೂರು: ಸದ್ಯ ಕೊರೊನಾ ಸಂದರ್ಭದಲ್ಲಿ ಜಾರಿ ಮಾಡಿರುವ ನಿಯಮಗಳು ಅಮಾನವೀಯತೆ ಆಗಬಾರದು ಅನ್ನೋದಕ್ಕೆ ಮಂಗಳೂರು ಬಜ್ಪೆ ಸೌಹಾರ್ದ ನಗರದ ಕಾಲೋನಿಯಲ್ಲಿ...

ದ.ಕ. ‌ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಬಂಟ್ವಾಳದ ತುಂಬೆ ಗ್ರಾಮವೇ ಕ್ವಾರಂಟೈನ್..!

ದ.ಕ. ‌ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಬಂಟ್ವಾಳದ ತುಂಬೆ ಗ್ರಾಮವೇ ಕ್ವಾರಂಟೈನ್..! ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಲ್ಲಿ ಕೊರೋನ ಸೋಂಕು ಪಾಸಿಟಿವ್‌ ಬಂದಿದ್ದು ಯುವಕನನ್ನು ಮಂಗಳೂರಿನ ವೆನ್ಲಾಕ್‌ ಕೊರೋನಾ...