ಮಂಗಳೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಏ.22ರ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನ ಜಿಲ್ಲೆಯಲ್ಲಿ 51 ಕೇಂದ್ರಗಳಲ್ಲಿ ಬ್ಯುಸಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆ ನಡೆದಿದ್ದು, 14,848 ವಿದ್ಯಾರ್ಥಿಗಳ ಪೈಕಿ 14,511 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
337 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಭೇಟಿ: ನಗರದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಏ.22ರ ಶುಕ್ರವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಹಾಗೂ ಅಧಿಕಾರಿಗಳಿದ್ದರು.