Monday, August 10, 2020

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾ ಅಟ್ಟಹಾಸಕ್ಕೆ ಪ್ರಾಣ ತೆತ್ತಿದ್ದಾರೆ.

ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 31 ಕ್ಕೆರಿಕೆಯಾಗಿದೆ. ಕೊರೊನಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರಿಗುಂಟು ಯಾರಿಗಿಲ್ಲ ಎಂಬ ಅನುಮಾನ ಜನರಲ್ಲಿ ಮೂಡಿದೆ.

ಈ ಹಿನ್ನೆಲೆಯಲ್ಲಿ ಕೊರೊನಾ ಸೊಂಕಿನಿಂದ ಪಾರಾಗಲು ಜನ ಸ್ವಯಂ ಲಾಕ್‌ ಡೌನ್‌ ಗೆ ಮುಂದಾಗಿದೆ. ದಕ್ಷಿಣ ಕನ್ನಡ ಬಜ್ಪೆ, ಉರ್ವಾ ಮಾರ್ಕೇಟ್, ಕಿನ್ನಿಗೊಳಿ ಪ್ರದೇಶಗಳಲ್ಲಿ ಜನ ಸ್ವತಹ ವ್ಯವಹಾರಗಳನ್ನು ಅರ್ಧ ದಿನಕ್ಕೆ ಸೀಮಿತಗೊಳಿಸಿದ್ದಾರೆ.

ಅಪರಾಹ್ನ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕೊರೊನಾ ಹಬ್ಬುವಿಕೆ ತಡೆಯುವ ಪ್ರಯತ್ನ ಆರಂಭಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಿನ್ನೆಲೆ ಇಂದಿನಿಂದ ಮುಂದಿನ 14 ದಿನಗಳ ಕಾಲ ಮಧ್ಯಾಹ್ನದ ಬಳಿಕ ಸ್ವಯಂಪ್ರೇರಿತ ಬಂದ್ ಗೆ ನಿರ್ಧರಿಸಲಾಗಿದೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ತಾಲೂಕಿನ ಫರಂಗಿಪೇಟೆ ಸೇರಿದಂತೆ ಪುದು ಗ್ರಾ.ಪಂ.ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ.

ಗ್ರಾಮದಲ್ಲಿ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸ್ಥಳೀಯ ವರ್ತಕರು, ಆಟೋ ಚಾಲಕರು ಸೇರಿದಂತೆ ಎಲ್ಲರಲ್ಲೂ 14 ದಿನಗಳ ಕಾಲ ಮಧ್ಯಾಹ್ನ 2 ಗಂಟೆಯ ಬಳಿಕ ಬಂದ್ ನಡೆಸುವಂತೆ ಮನವಿ ಮಾಡಲಾಗಿತ್ತು.

ಅದರಂತೆ ಇಂದು ವೈದ್ಯರ ಕ್ಲಿನಿಕ್‌ಗಳು ಹಾಗೂ ಮೆಡಿಕಲ್‌ಗಳು ಹೊರತು ಪಡಿಸಿ ಉಳಿದವುಗಳು ಬಂದ್ ಆಗಿತ್ತು.

ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರೋಗ್ಯಕೇಂದ್ರದ ವ್ಯಾಪ್ತಿಯಲ್ಲಿ, ಒಟ್ಟು 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.