Monday, July 4, 2022

ಪಂಪ್‌ವೆಲ್‌ ಜಂಕ್ಷನ್‌- ಪಡೀಲ್‌ವರೆಗಿನ ರಸ್ತೆ ಕಾಂಕ್ರೀಟಿಕರಣಕ್ಕೆ ಸಂಸದ ಚಾಲನೆ

ಮಂಗಳೂರು: ನಗರದ ಪಂಪ್‌ವೆಲ್‌ ಜಂಕ್ಷನ್‌ನಿಂದ ಪಡೀಲ್‌ವರೆಗಿನ ರಸ್ತೆಯನ್ನು ‘ಸ್ಮಾರ್ಟ್‌ ಸಿಟಿ’ ಯೋಜನೆಯಡಿ ಕಾಂಕ್ರೀಟೀಕರಣ ಕಾಮಗಾರಿಗೆ ನಿನ್ನೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭೂಮಿಪೂಜೆ ನೆರವೇರಿಸಿದರು.


2023ರ ವೇಳೆಗೆ ಮಂಗಳೂರು ನಗರವನ್ನು ಸಂಪರ್ಕಿಸುವ ಎಲ್ಲ ಹೆದ್ದಾರಿಗಳು ಚತುಷ್ಪಥ ರಸ್ತೆಗಳಾಗಿ ಅಭಿವೃದ್ಧಿಯಾಗಲಿದೆ’.

‘ಮುಂದಿನ ದಿನಗಳಲ್ಲಿ ಪಂಪ್‌ವೆಲ್‌ನಲ್ಲಿ ನೂತನ ಬಸ್‌ನಿಲ್ದಾಣ, ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಾರ್ಯಾಲಯ ಆರಂಭಗೊಳ್ಳಲಿದ್ದು, ಆ ಒತ್ತಡ ಪಂಪ್‌ವೆಲ್‌– ಪಡೀಲ್‌ ರಸ್ತೆಗೆ ವರ್ಗಾವಣೆಯಾಗಲಿದೆ. ಹೀಗಾಗಿ, ಈ ರಸ್ತೆಯನ್ನು ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ‘ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸರ್ಕಾರದ ವಿವಿಧ ಯೋಜನೆಯಡಿ ₹ 3 ಸಾವಿರ ಕೋಟಿಗೂ ಅಧಿಕ ಅನುದಾನ ಮಂಜೂರಾಗಿದೆ. ಅದರಲ್ಲಿ ₹ 500 ಕೋಟಿಯ ಕಾಮಗಾರಿ ಮಾತ್ರ ನಡೆದಿದೆ. ಉಳಿದ ಕಾಮಗಾರಿ ಹಂತಹಂತವಾಗಿ ನಡೆಯಲಿದೆ.

ಮೇಯರ್‌ ಪ್ರೇಮಾನಂದ ಶೆಟ್ಟಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರ್‌, ಮೀನುಗಾರಿಕಾ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ದಿ. ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರಿಸ್‌ ಲಿಮಿಟೆಡ್‌ನ ಅಧ್ಯಕ್ಷ ಸಂತೋಷ್‌ ಶೆಟ್ಟಿ ಬೊಳಿಯಾರ್, ಪಾಲಿಕೆಯ ಮುಖ್ಯಸಚೇತಕ ಸುಧೀರ್‌ ಶೆಟ್ಟಿ ಕಣ್ಣೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್‌ ಗರೋಡಿ,

ಲೀಲಾವತಿ ಪ್ರಕಾಶ್‌, ಮಾಜಿ ಮೇಯರ್‌ ದಿವಾಕರ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ಪ್ರವೀಣ್‌ಚಂದ್ರ ಆಳ್ವ, ಕೇಶವ ಮರೋಳಿ, ರೂಪಶ್ರೀ ಪೂಜಾರಿ, ಶೋಭಾ ಪೂಜಾರಿ, ವಿಜಯಕುಮಾರ್ ಶೆಟ್ಟಿ, ಭಾಸ್ಕರಚಂದ್ರ, ಪ್ರಭಾಮಾಲಿನಿ, ಮಾಜಿ ಸದಸ್ಯರಾದ ಆಶಾ ಡಿಸಿಲ್ವ, ಜೇಮ್ಸ್‌ ಡಿಸೋಜ ಇದ್ದರು. ಅರುಣ್‌ಪ್ರಭಾ ಸ್ವಾಗತಿಸಿದರು.
‘30 ಕೋಟಿ ವೆಚ್ಚದ ಯೋಜನೆ’
ಪಂಪ್‌ವೆಲ್‌– ಪಡೀಲ್‌ ರಸ್ತೆಯು 2,800 ಮೀ. ಉದ್ದವಿದ್ದು, ಇದನ್ನು 24 ಮೀ. ಅಗಲದಲ್ಲಿ ಕಾಂಕೀಟ್‌ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ರಸ್ತೆಯಲ್ಲಿ 3.5 ಮೀ. ಅಗಲದ 4 ಲೇನ್‌ ಕಾಂಕ್ರೀಟ್‌ ವೇ, ರಸ್ತೆಯ ಇಕ್ಕೆಲಗಳಲ್ಲಿ 3 ಮೀ. ಅಗಲದ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ರಸ್ತೆಯ ಎರಡು ಇಕ್ಕೆಲಗಳಲ್ಲಿ ಮಳೆನೀರು ಚರಂಡಿ, ಯುಟಿಲಿಟಿ ಡಕ್ಟ್‌, ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗುತ್ತದೆ. ಈ ರಸ್ತೆಯನ್ನು ಸ್ಮಾರ್ಟ್‌ಸಿಟಿ ಯೋಜನೆಯ 26 ಕೋಟಿ ಹಾಗೂ ಶಾಸಕರ ನಿಧಿ 4 ಕೋಟಿಯಲ್ಲಿ ಅಭಿವೃದ್ಧಿಯಾಗಲಿದೆ.

LEAVE A REPLY

Please enter your comment!
Please enter your name here

Hot Topics

ಅಕ್ರಮ ಗೋಸಾಗಾಟ ತಡೆಯಲು ಖಡಕ್‌ ಖಾಕಿಗೆ ಖಡಕ್‌ ಸೂಚನೆ ಕೊಟ್ಟ ಶಾಸಕ ಕಾಮತ್‌

ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...