Sunday, December 5, 2021

ಪುಣೆ: ಬ್ಯಾಟಿಂಗ್ ಮಾಡುತ್ತಲೇ ವ್ಯಕ್ತಿ ಹೃದಯಾಘಾತ;ವೀಡಿಯೋದಲ್ಲಿ ದಾಖಲಾಯಿತು ಸಾವಿನ ದೃಶ್ಯ..!

ಪುಣೆ: ಬ್ಯಾಟಿಂಗ್ ಮಾಡುತ್ತಲೇ ವ್ಯಕ್ತಿ ಹೃದಯಾಘಾತ;ವೀಡಿಯೋದಲ್ಲಿ ದಾಖಲಾಯಿತು ಸಾವಿನ ದೃಶ್ಯ..!

Pune: Man shot dead while batting..!

ಪುಣೆ: ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿದ್ದ ಸಂದರ್ಭದಲ್ಲಿ ಕ್ರಿಕೆಟ್‌ ಪಿಚ್‌ನಲ್ಲಿಯೇ ಆಟಗಾರನೊಬ್ಬ ಮೃತಪಟ್ಟಿರುವ ಘಟನೆ ಪುಣೆಯ ಜುನ್ನಾರ್‌ ತಾಲೂಕಿನ ಜಾಧವವಾಡಿ ಗ್ರಾಮದಲ್ಲಿ ನಡೆದಿದೆ. 47 ವರ್ಷದ ಬಾಬು ನಲ್ವಾಡೆ ಎಂಬುವವರು ಮೃತಪಟ್ಟಿದ್ದಾರೆ. ಸ್ಥಳೀಯ ನಿವಾಸಿಗಳು ಕ್ರಿಕೆಟ್ ಪಂದ್ಯ ಆಯೋಜಿಸಿದ್ದರು. ಇದರಲ್ಲಿ ಬಾಬು ಭಾಗವಹಿಸಿದ್ದರು. ಆಟವಾಡುತ್ತಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾಬು ಅವರು ನಾನ್ ಸ್ಟ್ರೈಕರ್‌ನ ತುದಿಯಲ್ಲಿ ನಿಂತಿದ್ದರು.ಆಗ ಏಕಾಏಕಿಯಾಗಿ ಕುಸಿದು ಬಿದಿದ್ದಾರೆ. ಇದರ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಯಿಂದ ಅವರಿಗೆ ಹೃದಯಾಘಾತವಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...