Thursday, December 2, 2021

ನಟ ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು​: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪುನೀತ್​ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...