Monday, January 24, 2022

ಪುನೀತ್‌ ರಾಜ್‌ಕುಮಾರ್‌ ಕನಸಿನ ಕೂಸು ‘ಗಂಧದ ಗುಡಿ’ ಟೀಸರ್‌ ಬಿಡುಗಡೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಕೂಸಾದ ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ.

ಪುನೀತ್‌ ಕರುನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿಸಿದ್ದರು. ಆದರೆ ಅದನ್ನು ಅಭಿಮಾನಿಗಳ ಮುಂದಿಡುವ ಮುನ್ನವೇ ಅವರು ಅಸುನೀಗಿದ್ದರು.

ಅವರ ಅನುಪಸ್ಥಿತಿಯಲ್ಲೇ ಇಂದು (ಡಿ.6) ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ.

ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಟೈಟಲ್​ ಟೀಸರ್​ ರಿಲೀಸ್​ ಮಾಡಲಾಗಿದೆ. ಈ ದಿನಕ್ಕಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾದಿದ್ದರು.

ಟೈಟಲ್​ ಟೀಸರ್​ ನೋಡಿ ಎಲ್ಲರೂ ಖುಷಿಪಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗುತ್ತಿದೆ. ಈ ವೇಳೆ ಅಪ್ಪು ನಮ್ಮೊಂದಿಗೆ ಇರಬೇಕಿತ್ತು ಎಂದು ಹೇಳುತ್ತಿದ್ದಾರೆ.

ಕೇವಲ ಒಂದು ಘಂಟೆಯಲ್ಲಿ 45 ಸಾವಿರ ಜನ ವೀಕ್ಷಿಸಿದ್ದಾರೆ.

 

 

Hot Topics

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...