Wednesday, May 18, 2022

ನಾಳೆ ಬೆಳಿಗ್ಗೆಯವರೆಗೂ ಪುನೀತ್‌ ಅಂತಿಮ ದರ್ಶನಕ್ಕೆ ಅವಕಾಶ: ಸಿಎಂ ಸ್ಪಷ್ಟನೆ

ಬೆಂಗಳೂರು: ನಟ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ನಾಳೆ(ಭಾನುವಾರ) ನಡೆಯಲಿದೆ. ಇಂದು ಸಂಜೆ ವೇಳೆಗೆ ಸಮಯ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಪುನೀತ್ ಅವರ ಮಗಳು ಧೃತಿ ಅಮೆರಿಕದಿಂದ ದೆಹಲಿ ತಲುಪಿದ್ದು, ಅಲ್ಲಿಂದ ಬೆಂಗಳೂರು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಅವರು ಇಂದು ಸಂಜೆ ಬರುವ ಸಾಧ್ಯತೆ ಇದೆ. ಇಲ್ಲಿಯೂ ಜನಸಂದಣಿ ಹೆಚ್ಚಾಗಿದೆ. ಬಹಳಷ್ಟು ಜನ ಅಪ್ಪು ಅವರ ಅಂತಿಮ ದರ್ಶನ ಪಡೆಯುವ ಇಚ್ಛೆ ಹೊಂದಿದ್ದಾರೆ. 6 ಗಂಟೆಯ ನಂತರ ಕತ್ತಲಾದ ಮೇಲೆ ಸಣ್ಣಜಾಗದಲ್ಲಿ ಅಂತ್ಯಕ್ರಿಯೆ ಮಾಡುವುದು ಸವಾಲಿನ ಕೆಲಸ.

ಕುಟುಂಬ ಸದಸ್ಯರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ತಿಳಿಸಿದರು.ನಾಳೆ ಬೆಳಗಿನ ಜಾವದವರೆಗೂ ದರ್ಶನ ಮಾಡಲು ಅನುಕೂಲ ಮಾಡಲಾಗುವುದು. ಎಲ್ಲರೂ ನಿಧಾನವಾಗಿ, ಶಾಂತವಾಗಿ ಸಾಲಿನಲ್ಲಿ ಬಂದು ದರ್ಶನ ಪಡೆಯಬಹುದು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....