Thursday, August 11, 2022

‘ಲಂಚ ಕೇಳಿದಾಗ ಹಣ ಕೊಟ್ಟು ವೀಡಿಯೋ ರೇಕಾರ್ಡ್‌ ಮಾಡಿ ಸಿಎಂ ನಂಬರ್‌ಗೆ ವಾಟ್ಸಪ್‌ ಮಾಡಿ’

ನವದೆಹಲಿ: ಪಂಜಾಬ್​​ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್​ ಮಹತ್ವದ ನಿರ್ಧಾರ ಕೈಗೊಂಡಿದ್ದು,

ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಕೂಡಾ ಮಾತನಾಡಿದ್ದಾರೆ.


ಯಾರಾದ್ರೂ ನಿಮ್ಮ ಹತ್ತಿರ ಲಂಚ ಕೇಳಿದಾಗ ಇಲ್ಲ ಎಂದು ಹೇಳಬೇಡಿ ಎಂದಿರುವ ಕೇಜ್ರಿವಾಲ್​, ಅವರಿಗೆ ಹಣ ನೀಡಿ ಸಂಭಾಷಣೆ ಅಥವಾ ಅದರ ರೆಕಾರ್ಡ್ ಮಾಡಿಕೊಳ್ಳಿ.

ಬಳಿಕ, ಆಡಿಯೋ/ವಿಡಿಯೋ ಅನ್ನು ನೇರವಾಗಿ ಸಿಎಂ ಅವರ ವಾಟ್ಸಾಪ್​ ಸಂಖ್ಯೆಗೆ ರವಾನಿಸಿ ಎಂದಿದ್ದಾರೆ. ಭ್ರಷ್ಟರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪಂಜಾಬ್​ ಜನತೆಗೆ ನಾವು ಭರವಸೆ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಿನಿಂದಲೂ ಭಗವಂತ್ ಮಾನ್ ಜನಸ್ನೇಹಿ ಹೊಸ ಹೊಸ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.

ಮಾರ್ಚ್​​ 23ರಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​​ ಸಿಂಗ್​ ‘ಶಹೀದ್ ದಿವಸ್’​​ ಅಂಗವಾಗಿ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸುವುದಾಗಿ ಮಾನ್​ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ಅಥವಾ ಯಾರಾದರೂ ಲಂಚ ಕೇಳಿದರೆ ರಾಜ್ಯದ ಜನರು ಇನ್ಮುಂದೆ ಯಾವುದೇ ಮುಲಾಜಿಲ್ಲದೆ ತನ್ನದೇ ವಾಟ್ಸಾಪ್​ ನಂಬರ್‌ಗೆ ವಿಡಿಯೋ ಅಥವಾ ಆಡಿಯೋ ರೆಕಾರ್ಡ್‌ ಮಾಡಿ ನೇರವಾಗಿ ಕಳುಹಿಸಬಹುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಲು ಜಾರಿ ಹೊಳೆಗೆ ಬಿದ್ದ ಸನ್ನಿಧಿಯ ಅಂತ್ಯಕ್ರಿಯೆ: ಮುಗಿಲು ಮುಟ್ಟಿದ ಕುಟುಂಬಸ್ಥರು-ಸ್ನೇಹಿತರ ಆಕ್ರಂದನ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ...

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...