Home ಪ್ರಮುಖ ಸುದ್ದಿ ಕಾರು ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಕಾರು ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಕಾರು ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಬಂಟ್ವಾಳ: ಮೆಹಂದಿ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುವ ಮಧ್ಯ ರಾತ್ರಿ ವೇಳೆ ಪುಂಜಾಲಕಟ್ಟೆ ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದ ಘಟನೆಯ ಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ತೆಂಕಕಜೆಕಾರು ಕಾರ್ಲ ನಿವಾಸಿ ಇಂದಿರಾ ( 55) ಮೃತ ಮಹಿಳೆ. ವೇಣೂರು ಕಾಶಿಪಟ್ನದಲ್ಲಿ ಇಂದಿರಾ ಅವರ ಮಗಳ ಮನೆಯಲ್ಲಿ ನಡೆಯುವ ಮದರಂಗಿ ಶಾಸ್ತ್ರ ದಲ್ಲಿ ಭಾಗಿಯಾಗಿ ವಾಪಾಸು ಅಗುವ ವೇಳೆ ಪುಂಜಾಲಕಟ್ಟೆ ದೈಕಿನಕಟ್ಟೆ ತಿರುವಿನಲ್ಲಿ ಈ ಘಟನೆ ನಡೆದಿದೆ.

ಇಂದಿರಾ ಅವರು ಗಂಡ ನಿವೃತ್ತ ಸೈನಿಕ ಸದಾನಂದ ಅವರ ಜೊತೆ ಸ್ವಿಫ್ಟ್ ಕಾರಿನಲ್ಲಿ ಕಾಶಿಪಟ್ನ ದಿಂದ ಮಧ್ಯರಾತ್ರಿ ಬರುವ ವೇಳೆ ಸದಾನಂದ ಅವರು ಕಾರು ಚಲಾಯಿಸುತ್ತಿದ್ದು ಅವರ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದಿದೆ. ಕಾರು ಹೊಂಡಕ್ಕೆ ಬಿದ್ದ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರಕ್ಕೆ ತೆಗೆದು 108 ಅಂಬ್ಯುಲೆನ್ಸ್ ವಾಹನದ ಮೂಲಕ ಆಸ್ಪತ್ರೆಗೆ ಸಾಗಿಸಿದರಾದರೂ ಗಂಭೀರ ಸ್ವರೂಪದ ಗಾಯಗಳಾಗಿದ್ದ ಇಂದಿರಾ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅಲ್ಪಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿರುವ ಸದಾನಂದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳ ಕ್ಕೆ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!