BELTHANGADY
Belthangady: ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿ- 42 ಸಿಮ್ ಕಾರ್ಡ್ ಜೊತೆ ಐವರ ಬಂಧನ..!
ಬೆಳ್ತಂಗಡಿ: ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸುಮಾರು 42 ಸಿಮ್ ಕಾರ್ಡ್ ಖರೀದಿ ಮಾಡಿ ಬೆಂಗಳೂರಿಗೆ ಹೊರಟಿದ್ದ ಐವರು ಯುವಕರನ್ನು ಧರ್ಮಸ್ಥಳದ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ತೊಟತ್ತಾಡಿ ಎಂಬಲ್ಲಿಯ ಐವರು ಯುವಕರು ಸಿಮ್ ಕಾರ್ಡ್ ಖರೀದಿಸಿದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ನೆರಿಯಾ ಗ್ರಾಮದ ತೋಟತ್ತಾಡಿಯಲ್ಲೇ ಬೇರೆ ಬೇರೆಯವರ ಹೆಸರಿನಲ್ಲಿ ಇವರು ಸಿಮ್ ಕಾರ್ಡ್ ಖರೀದಿ ಮಾಡಿದ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಯುವಕರನ್ನು ಹುಡುಕಾಡುತ್ತಿದ್ದ ಪೊಲೀಸರಿಗೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ಗುಂಪಾಗಿ ನಿಂತಿರುವುದು ಕಂಡು ಬಂದಿತ್ತು. ತಕ್ಷಣ ಅವರನ್ನು ವಶಕ್ಕೆ ಪಡದುಕೊಂಡು ಅವರ ಬ್ಯಾಗ್ ತಪಾಸಣೆ ಮಾಡಿದಾಗ ಬ್ಯಾಗಲ್ಲಿ 42 ಸಿಮ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್, ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಬರ್ ಆಲಿ, ಬೆಳ್ತಂಗಡಿ ನಗರದ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ, ಬೆಳ್ತಂಗಡಿ ತಾಲೂಕಿನ ಪಡಂಗಡಿ ಬದ್ರಿಯಾ ಮನ್ಝೀಲ್ ನಿವಾಸಿ ಮಹಮ್ಮದ್ ಸಾಧಿಕ್, ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕ ಎಂದು ಮಾಹಿತಿ ಲಭ್ಯವಾಗಿದೆ. ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರೂ ಯುವಕರು ಸಿಮ್ ಕಾರ್ಡ್ ಖರೀದಿಯ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಬೆಂಗಳೂರಿಗೆ ತೆರಳುವ ಉದ್ದೇಶದ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ ಎಂದು ತಿಳಿದು ಬಂದಿದೆ. ಅಕ್ರಮ ಹಣ ವರ್ಗಾವಣೆ, ಆನ್ಲೈನ್ ವಂಚನೆ ಅಥವಾ ಇನ್ಯಾವುದೋ ಕುಕೃತ್ಯ ನಡೆಸಲು ಸಿಮ್ ಖರೀದಿ ಮಾಡಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇವರು ಸಿಮ್ ಕಾರ್ಡ್ ಖರೀದಿಯ ಹಿಂದೆ ಬೇರೆ ಯಾರೋ ಇದ್ದಾರೆ ಎಂಬ ಅನುಮಾನ ಕೂಡಾ ಪೊಲೀಸರಿಗೆ ಇದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಯಲಯ ನ್ಯಾಯಾಂಗ ಬಂಧನ ವಿಧಿಸಿದೆ.
BELTHANGADY
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.
ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
- DAKSHINA KANNADA1 day ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS6 days ago
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM3 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY2 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು