DAKSHINA KANNADA
Mangaluru: ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು- ಶಾಸಕ ಗುರುರಾಜ ಗಂಟಿಹೊಳೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್ ಮೆನೆಜಸ್ ಬ್ರಗಾನ್ಸಾ ಸಭಾಗೃಹದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಯುವ ಸಮುದಾಯ ಯಕ್ಷಗಾನದ ಆಕರ್ಷಣೆಗೆ ಒಳಗಾಗಿದ್ದಾರೆ. ಪುರಾಣದ ಕತೆಗಳನ್ನು ತಿಳಿದುಕೊಳ್ಳುವ ಆಸಕ್ತಿಯೂ ಯುವ ಸಮುದಾಯಕ್ಕೆ ಇದೆ. ಯಕ್ಷಗಾನ ಮೇಲ್ಪಂಕ್ತಿಯಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲಿ. ಯಕ್ಷಗಾನವನ್ನು ಆರಾಧಿಸೋಣ, ಪ್ರೀತಿಸೋಣ ಎಂದರು. 40 ನೇ ಘಟಕವನ್ನು ಬೈಂದೂರಿನಲ್ಲಿ ಸ್ಥಾಪಿಸುವುದಾಗಿ ಗಂಟಿಹೊಳೆ ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಬರೋಡಾ ತುಳುಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಮಾತನಾಡಿ ಮುಂದಿನ ವರ್ಷ ಗೋವಾದ ಬೀಚ್ ಬಳಿ ಪಟ್ಲ ಫೌಂಡೇಶನ್ ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ ಗೋವಾದಲ್ಲಿ ಘಟಕ ಸ್ಥಾಪಿಸುವುದು ಬಹು ದಿನಗಳ ಕನಸಾಗಿತ್ತು. ಗೋವಾ ಘಟಕದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಜವಾಬ್ದಾರಿ ಹೊತ್ತು ಘಟಕ ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಗೋವಾ ಘಟಕದಡಿ ಅನೇಕ ಯಕ್ಷಗಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿ ಎಂದರು. ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಸಮಾರಂಭದಲ್ಲಿ ಕಂಬಳ ವಿಭಾಗದ ಅಶೋಕ್ ಶೆಟ್ಟಿ ಬೇಲಾಡಿ, ಸದಾನಂದ ಶೆಟ್ಟಿ ಬೆಳುವಾಯಿ, ಮಾಜಿ ರಣಜಿ ಆಟಗಾರ ಜಯೇಶ್ ಶೆಟ್ಟಿ ಗೋವಾ, ಯಕ್ಷಗಾನ ಭಾಗವತರಾದ ಸದಾಶಿವ ಅಮೀನ್ ಕೊಕ್ಕರ್ಣೆ, ಯಕ್ಷಗಾನ ಪಾತ್ರಧಾರಿಗಳಾದ ನವೀನ್ ಶಾನ್ ಭೋಗ್, ಮಹಾಬಲ ಭಟ್ ಗೋವಾ, ಇವರಿಗೆ ಸನ್ಮಾನ ನಡೆಯಿತು.
ಅಮೃತೇಶ್ವರಿ ಮೇಳದ ಸತೀಶ್ ಮೊಗವೀರ ಹಾಲಾಡಿ, ಕಮಲಶಿಲೆ ಮೇಳದ ವಿಶ್ವನಾಥ ಪೂಜಾರಿ ಹೆನ್ನಾಬೈಲ್, ಮಾರಣಕಟ್ಟೆ ಮೇಳದ ರಾಕೇಶ್ ಶೆಟ್ಟಿ ಮೇಗರಹಳ್ಳಿ ಇವರಿಗೆ ಸನ್ಮಾನಿಸಿ ಆರ್ಥಿಕ ನೆರವು ನೀಡಲಾಯಿತು.
ಸಮಾರಂಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗುಜರಾಜ್ ಘಟಕದ ಅಧ್ಯಕ್ಷ ಅಜಿತ್ ಶೆಟ್ಟಿ, ಗೋವಾ ಬಂಟರ ಸಂಘದ ಅಧ್ಯಕ್ಷ ಶಶಿಧರ ನಾಯ್ಕ್, ಗೋವಾ ಬಿಲ್ಲವ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ, ಗೋವಾ ನಾರಾಯಣ ಗುರು ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪೂಜಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಮಂಗಳೂರು ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ, ಚಲನಚಿತ್ರ ನಟ ಪ್ರಸನ್ನ ಶೆಟ್ಟಿ ಬೈಲೂರು, ಗೋವಾ ಘಟಕದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು, ಗೌರಾವಾಧ್ಯಕ್ಷ ವಿಜಯೇಂದ್ರ ಶೆಟ್ಟಿ, ಸುಭಾಸ್ ರೈ ಕರ್ನೂರ್ ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಮಂದಾರ್ತಿ ನಡೂರು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶಿವದೂತ ಪಂಜುರ್ಲಿ ಯಕ್ಷಗಾನ ಪ್ರದರ್ಶನ ಜರಗಿತು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್