Connect with us

    DAKSHINA KANNADA

    ಯಕ್ಷಗಾನದಲ್ಲೂ ಸದ್ದು ಮಾಡಿದ ‘ಪುಷ್ಪಾ’ ಚಿತ್ರದ ಶ್ರೀವಲ್ಲಿ ಹಾಡಿನ ಮೋಡಿ

    Published

    on

    ಮಂಗಳೂರು: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ.


    ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ಸಿನಿಪ್ರಿಯರ ಮೆಚ್ಚುಗೆಗೆ ಕಾರಣವಾಗಿದ್ದು ಮಾತ್ರವಲ್ಲದೆ ಜನರು ಕೂಡ ಹಾಡಿಗೆ ತಮ್ಮದೇ ಆದ ಸ್ಟೆಪ್ ಗಳನ್ನು ಮಾಡಿ ಖುಷಿಪಟ್ಟಿದ್ದಾರೆ.

    ಅದರಲ್ಲೂ ಈ ಚಿತ್ರದ ಶ್ರೀವಲ್ಲಿ ಹಾಡಿಗೆ ಕ್ರಿಕೆಟರ್ಸ್ ಸೇರಿದಂತೆ ಈಗಾಗಲೇ ದೇಶ ವಿದೇಶದ ಘಟಾನುಘಟಿ ಸೆಲೆಬ್ರಿಟಿಗಳು ಮನಸೋತಿದ್ದಾರೆ. ಇದೀಗ ಶ್ರೀ ವಲ್ಲಿ ಹಾಡು ನಮ್ಮ ಕರ್ನಾಟಕದ ಗಂಡುಕಲೆ ಯಕ್ಷಗಾನಕ್ಕೂ ಪ್ರವೇಶ ಮಾಡಿದೆ.

    ಈ ಹಾಡನ್ನು ಯಕ್ಷಗಾನದಲ್ಲಿ ಅಳವಡಿಸಿದ್ದು ಮಾತ್ರವಲ್ಲದೆ, ಭಾಗವತರು ಹಾಡಿದ ಈ ಹಾಡಿಗೆ ಯಕ್ಷಗಾನ ಕಲಾವಿದರೊಬ್ಬರು ತಕ್ಕದಾದ ನೃತ್ಯವನ್ನು ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು ಮಾತ್ರವಲ್ಲದೆ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿದ್ದಾರೆ.

    ಇದೀಗ ಈ ನೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವರು ಪ್ರಶಂಸೆ ಮಾಡುತ್ತಿದ್ದರೆ ಇನ್ನು ಕೆಲವರು ಈ ಬದಲಾವಣೆ ಯಕ್ಷಗಾನದಲ್ಲಿ ಬೇಕಿತ್ತಾ ಅನ್ನುವ ಪ್ರಶ್ನೆಯನ್ನು ಕೂಡ ಕೇಳಿದ್ದಾರೆ.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending