Thursday, April 22, 2021

ಮನೆಮಂದಿಯನ್ನು ಕೋಣೆಯೊಳಗೆ ಕೂಡಿ ಹಾಕಿ ನಗ ನಗದು ದೋಚಿದ ಕಳ್ಳರು..!

ಪುತ್ತೂರು: ಮನೆಯೊಳಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕೋಣೆಯೊಳಗೆ ಕೂಡಿ ಹಾಕಿ ಬೆಳ್ಳಿ ನಾಣ್ಯ ಮತ್ತು ನಗದು ದೋಚಿದ ಘಟನೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಪರಣೆ ಎಂಬಲ್ಲಿ ನಡೆದಿದೆ.  
ಪಾಲ್ತಾಡಿ ಗ್ರಾಮದ ಪರಣೆ ನಿವಾಸಿ ಮಿತ್ರಾ ಜೈನ್ ಬಂಬಿಲಗುತ್ತu ಅವರ ಮನೆಯ ಬಳಿ ಬಂದು ಹಂಚು ತೆಗೆದು ಒಳನುಗ್ಗಿದ್ದ ಕಳ್ಳರು ಕೋಣೆಯಲ್ಲಿ ಮಲಗಿದ್ದ ಮಿತ್ರಾ ಜೈನ್ ಮತ್ತು ಅವರ ಪುತ್ರಿ ದಿವ್ಯರನ್ನು ಅದೇ ಕೋಣೆಯೊಳಗೆ ಕೂಡಿ ಹಾಕಿ ನಗದು ಹಾಗೂ ಬೆಳ್ಳಿ ನಾಣ್ಯಗಳನ್ನ ಕದ್ದೊಯ್ದಿದ್ದಾರೆ. ಈ ಕುರಿತು ಮಿತ್ರಾ ಜೈನ್ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...