Connect with us

DAKSHINA KANNADA

ಪುತ್ತೂರು : ಒಳಿತು ಮಾಡು ಮನುಷ್ಯ ತಂಡದ 24ನೇ ಕಾರ್ಯಕ್ರಮ- 63 ಜನರಿಗೆ ಆಹಾರ ಕಿಟ್ ವಿತರಣೆ.. 

Published

on

ಪುತ್ತೂರು: ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ,ಜೆಸಿಐ ಪುತ್ತೂರು,ಲಯನ್ಸ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 24ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಜೂನ್30 ರಂದು ಪುತ್ತೂರಿನ ಸೈನಿಕ ಭವನ ರಸ್ತೆಯಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.  

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಮಾತನಾಡಿ ಖಾಸಗಿ ಆಸ್ಪತ್ರೆ ಗಳಲ್ಲಿ ಡಯಾಲಿಸ್ ಮಾಡುವ ರೋಗಿಗಳ ನೋವನ್ನು ನಾನು ಕಂಡಿದ್ದೇನೆ.

ಅವರ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ದಾನಿಗಳ ಮುಖಾಂತರ ಹಣ ಸಂಗ್ರಹ ಮಾಡಿ ಅದನ್ನು ಕಿಟ್ ಮೂಲಕ ಅಶಕ್ತ ಕುಟುಂಬಗಳಿಗೆ ನೀಡುತ್ತಿದ್ದಾರೆ.

ದಾನಿಗಳ ಮುಖಾಂತರ ಸಮಾಜಕ್ಕಾಗಿ ಈ ಕೆಲಸವನ್ನು ಮಾಡುತ್ತಿದ್ದಾರೆ.

ಕಷ್ಟ ದಲ್ಲಿರುವವರ ಕಣ್ಣೀರನ್ನು ಒರೆಸುವ ಕೆಲಸವನ್ನು ಈ ತಂಡ ಮಾಡುತ್ತಿದೆ.ಇವರಿಗೆ ಅಭಿನಂದನೆ ಯನ್ನು ಹೇಳುತ್ತಿದ್ದೇನೆ.

ಇದು ಶ್ರೇಷ್ಟವಾದ ಕೆಲಸ ಇವರಿಗೆ ಸಮಾಜದಲ್ಲಿ ಉತ್ತಮವಾದ ಗೌರವ ಸಿಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಕೇಶವ ನಾಯ್ಕ,ಖಜಾಂಚಿ ಮಂಜುನಾಥ್ ,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 63,000 ಸಾವಿರ ಮೊತ್ತದ 63 ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 54 ಜನರಿಗೆ ಬಿಪಿ,ಶುಗರ್ ತಪಾಸಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ಶೋಭಾ ಮಡಿವಾಳ, ಸ್ಥಾಪಕ ಅಧ್ಯಕ್ಷರಾದ ಚೇತನ್ ಕುಮಾರ್, ಸದಸ್ಯರಾದ ಶ್ರೀಮತಿ ಕಾವ್ಯ,ಶ್ರೀಮತಿ ಸರಸ್ವತಿ, ಕುಮಾರಿ ಚಿತ್ರ,ಕುಮಾರಿ ಅತ್ಮಿ,ಕುಮಾರಿ ಸಹನಾ,ಕುಮಾರಿ ಆಶಾ, ಶ್ರೀಮತಿ ಸರಸ್ವತಿ,ಶ್ರೀಮತಿ ವಸಂತಿ,ಹಾಗೂ ಅಕ್ಷಯ್ ಕುಲಾಲ್ ಉಪಸ್ಥಿತರಿದ್ದರು.ಪ್ರಾರ್ಥನೆಯನ್ನು ಗಣ್ಯ, ಸುನೀತಾ ನೆರವೇರಿಸಿ ಕೊಟ್ಟರು,ಸ್ವಾಗತವನ್ನೂ ಶ್ರೀಮತಿ ಗೀತಾ ಹಾಗೂ ಧನ್ಯವಾದವನ್ನು ವಿಜಯ್ ಕುಮಾರ್ ನಡೆಸಿಕೊಟ್ಟರು.

ಶ್ರೀಮತಿ ಶೃತಿಕ ಹಾಗೂ ಕುಮಾರಿ ಸೌಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

LATEST NEWS

Trending