ಪುತ್ತೂರು : ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ನಡೆದಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.
ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾಧಾನ ಪಡಿಸಲು ಯತ್ನಿಸಿದ್ದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.
ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೇತೃತ್ವದ ಪೊಲೀಸರ ತಂಡ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿ ಕೊಟ್ಟರು.