DAKSHINA KANNADA
Puttur: ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಪರಿಚಿತರಿಂದ ದಾಳಿ- ಪ್ರಕರಣ ದಾಖಲು..!
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಪ್ರದೀಪ್ ರೈ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದನ್ನು ಕೂಡ ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ.
ಹಲ್ಲೆಯಿಂದ ಗಾಯಗೊಂಡ ಪ್ರದೀಪ್ ರೈ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರದೀಪ್ ರೈ ಅವರು ವಿಧಾನಸಭಾ ಚುನಾವಣೆ ವೇಳೆ ಕೊಡಗು ಜಿಲ್ಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು.
ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು.
ಅಲ್ಲದೇ ಕೊಡಗಿನಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿಯೂ ಯಶಸ್ವಿಯಾಗಿದ್ದರು.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ