Connect with us

    DAKSHINA KANNADA

    Puttur: ಮನೀಶ್‌ ಕುಲಾಲ್‌ ಹಲ್ಲೆಗೆ ಯತ್ನ: ತಂದೆಯಿಂದ ದೂರು..!

    Published

    on

    ಪುತ್ತೂರು: ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಮತ್ತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವಣ ತಲವಾರು ಕಾಳಗ ಪ್ರಕರಣ ಕುರಿತಂತೆ ಹೊಸ ಹೊಸ ಬೆಳವಣಿಗೆಗಳಾಗುತ್ತಿವೆ.

    ಇದೀಗ ನಾಲ್ಕು ತಿಂಗಳ ಹಿಂದೆ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆ ಎಂಬಾತ ಅಕ್ರಮ ಪ್ರವೇಶ ಮಾಡಿದ್ದಾನೆಂದು ಪುತ್ತಿಲ ಪರಿವಾರದ ಸದಸ್ಯ ಮನೀಶ್ ಕುಲಾಲ್ ತಂದೆ ದೂರು ನೀಡಿದ್ದಾರೆ. ಜುಲೈ 10 ರಂದು ಮನೀಶ್ ಕುಲಾಲ್ ಮನೆಗೆ ಹೋಗಿದ್ದ ಅಜಿತ್ ರೈ ಹೋಗಿ ಮನಿಶ್ ಮೇಲೆ ಹಲ್ಲೆಗೆ ಮುಂದಾಗಿದ್ದ ಎಂಬುದಾಗಿ ಮನಿಶ್ ಕುಲಾಲ್ ತಂದೆ ಆನಂದ ಮೂಲ್ಯ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಾಲ್ಕು ತಿಂಗಳ  ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ತಡವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿ ಕೊಂಡಿದ್ದಾರೆ. ಅಂದು ಈ ಪ್ರಕರಣ ರಾಜಿಯಲ್ಲಿ ಮುಕ್ತಾಯವಾಗಿದೆ ಎಂದು ತಾನು ಭಾವಿಸಿದ್ದೆ ಎಂಬುದಾಗಿ ಮನಿಶ್ ಕುಲಾಲ್ ತಂದೆ ಆನಂದ ಅವರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಮನಿಶ್ ಕುಲಾಲ್ ಮೇಲೆ ಇನ್ನೊಂದು ಹಲ್ಲೆ ಯತ್ನ ಘಟನೆ ನಡೆದ ಹಿನ್ನಲೆಯಲ್ಲಿ ಭಯಗೊಂಡು ನಾಲ್ಕು ತಿಂಗಳ ಹಿಂದಿನ ಘಟನೆಯ ಕುರಿತು ಆನಂದ ಮೂಲ್ಯ ದೂರು ನೀಡಿದ್ದಾರೆ. ಈ ಹಿಂದೆ ಅಜಿತ್ ರೈ ಮತ್ತು ಮನೀಶ್ ಕುಲಾಲ್ ಇಬ್ಬರೂ ಹಿಂದೂ ಜಾಗರಣ ವೇದಿಕೆಯಲ್ಲಿ ಒಟ್ಟಿಗೆ ದುಡಿಯುತ್ತಿದ್ದರು.

     

     

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
    ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

    ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

    Continue Reading

    BANTWAL

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    Published

    on

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

    ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

    ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Continue Reading

    DAKSHINA KANNADA

    ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

    Published

    on

    ಮಂಗಳೂರು : ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್ ವಾಲ ಮತ್ತು ಹಿಂದಿ ಬಿಗ್ ಬಾಸ್ 18ರ ಸ್ಪರ್ಧಿ ಸುನಿಲ್ ಪಾಟೀಲ್ ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ.

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ. 18 ರಿಂದ 22 ರವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್” ನಡೆಯಲಿದೆ. ಈ ಕಾರ್ಯಕ್ರಮದ ಮೊದಲ ಆಕರ್ಷಣೆಯಾಗಿ ಡಾಲಿ ಚಾಯ್ ವಾಲ ಅವರು ಭಾಗವಹಿಸಲಿದ್ದಾರೆ.

    ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ: ದಾಖಲೆಯ ಪ್ರಯಾಣಿಕರ ನಿರ್ವಹಣೆ

    ತನ್ನ ಬರುವಿಕೆಯ ಕುರಿತು ಡಾಲಿ ಚಾಯ್ ವಾಲ ಅವರು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ..ಚಾಯ್ ಪಿಯೇಂಗೆ” ಎಂದು ಪೋಸ್ಟ್ ಮಾಡಿದ್ದಾರೆ.

    ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್ ಹಂಚಿಕೊಂಡಿದ್ದರು. ಇದಾದ ಬಳಿಕ ಡಾಲಿ ಚಯ್ ವಾಲರವರ ಖ್ಯಾತಿ ದೇಶದಾದ್ಯಂತ ಇನ್ನಷ್ಟು ಜಾಸ್ತಿಯಾಯಿತು.

    Continue Reading

    LATEST NEWS

    Trending