Thursday, February 9, 2023

ಪುತ್ತೂರು: ಚಲಿಸುತ್ತಿದ್ದಾಗಲೇ ಕಾರು ಪಲ್ಟಿ-ದಂಪತಿ ಬಚಾವ್

ಪುತ್ತೂರು: ಚಲಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾರೆಪುಣಿಯ ಕುಂಬ್ರ ಸಮೀಪದ ಕೊಳ್ಳಾಜೆ ಎಂಬಲ್ಲಿ ನಡೆದಿದೆ.


ಉಪ್ಪಿನಂಗಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರಿಗೆ ಸೇರಿದ ಕಾರು ಇದು ಇದಾಗಿದ್ದು, ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಪಲ್ಟಿಯಾಗಿದೆ.


ಕಾರಿನಲ್ಲಿದ್ದ ಗೋಪಾಲಕೃಷ್ಣ ಭಟ್ ಹಾಗು ಅವರ ಪತ್ನಿ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...