Connect with us

    LATEST NEWS

    ಪುತ್ತೂರು : ಡಿವೈಡರ್‌ಗೆ ಕಾರು ಡಿ*ಕ್ಕಿ; ಯುವಕ ಸಾ*ವು

    Published

    on

    ಪುತ್ತೂರು : ಕಾರೊಂದು ಡಿವೈಡರ್‌ಗೆ ಡಿ*ಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃ*ತಪಟ್ಟ ಘಟನೆ ನಿನ್ನೆ (..17) ಸಂಜೆ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ  ನಡೆದಿದೆ.

    ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್ (26) ಮೃ*ತ ಯುವಕ ಎಂದು ಗುರುತಿಸಲಾಗಿದೆ.

    ಜಗದೀಶ್ ಸ್ನೇಹಿತ ಕಾರು ಚಾಲಕ ಸಚಿನ್ ಎಂಬವರು ಗಾ*ಯಗೊಂಡಿದ್ದಾರೆ. ಜಗದೀಶ್ ಹಾಗೂ ಅವರ ಸ್ನೇಹಿತರು ನಾಲ್ಕೈದು ಕಾರುಗಳಲ್ಲಿ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಗಡಿ ದೇವಸ್ಥಾನಕ್ಕೆ ಹೋಗಿದ್ದರು. ಅಲ್ಲಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಈ ದು*ರ್ಘಟನೆ ಸಂಭವಿಸಿದೆ.

    ಸಚಿನ್ ಚಲಾಯಿಸುತ್ತಿದ್ದ ಕಾರಿನಲ್ಲಿ ಜಗದೀಶ್ ಮಾತ್ರ ಇದ್ದು, ವೇಗವಾಗಿ ಬಂದ ಕಾರು ಮಣ್ಣಗುಂಡಿಯಲ್ಲಿ ಡಿವೈಡರ್‌ಗೆ ಡಿ*ಕ್ಕಿಯಾಗಿ ಡಿವೈಡರ್ ಮೇಲೆ ಏರಿ ನಿಂತಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದೆ.

    ಘಟನೆಯ ಕುರಿತು ನೆಲ್ಯಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Baindooru

    ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

    Published

    on

    ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

    ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

    ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    LATEST NEWS

    Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು

    Published

    on

    ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸಳೆದಿದೆ.

    X ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ, ಕೆಂಪು ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುವ ನಾಲ್ವರು ಯುವಕರು ಜನರ ಸಾಲಿನಲ್ಲಿ ವೇಗವಾಗಿ ಚಲಿಸುತ್ತ ಪೇಪರ್ ಪ್ಲೇಟ್, ಕಪ್ ಮತ್ತು ಬೌಲ್‌ಗಳನ್ನು ಹಾಕುವುದನ್ನು ನೋಡಬಹುದಾಗಿದೆ.

    ನಿಖರತೆಯೊಂದಿಗೆ ಏಕಕಾಲದಲ್ಲಿ ಇವರುಗಳು ಆಹಾರ ಬಡಿಸುವುದನ್ನು ವಿಡಿಯೋ ಒಳಗೊಂಡಿದೆ. ಮೊದಲ ಗುಂಪು ಕಾರ್ಯನಿರ್ವಹಿಸುತ್ತಿದ್ದಂತೆ, ಎರಡನೇ ಗುಂಪು ಅದೇ ವೇಗದ ಚಲನೆಯನ್ನು ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆಯುತ್ತದೆ. “MBBS (ಮಾಸ್ಟರ್ ಇನ್ ಭಂಡಾರ ಮತ್ತು ಬ್ಯಾಚುಲರ್ ಆಫ್ ಸರ್ವಿಂಗ್)” ಎಂಬ ಶೀರ್ಷಿಕೆಯ ಈ ವೀಡಿಯೋ ಬಳಕೆದಾರರು ಬಡಿಸುವ ಅವರ ವೇಗ ಮತ್ತು ಕೌಶಲ್ಯದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ.

    Watch Video:

    Continue Reading

    LATEST NEWS

    Trending