Connect with us

    LATEST NEWS

    ಪುತ್ತೂರು: ಗ್ಯಾಸ್ ಪೂರೈಕೆ ಮಾಡುತ್ತಿದ್ದ ವ್ಯಕ್ತಿ ಆತ್ಮ*ಹತ್ಯೆ

    Published

    on

    ಪುತ್ತೂರು: ಇಲ್ಲಿನ ಬನ್ನೂರು ಮೇಲ್ಮಜಲಿನಲ್ಲಿ ಸೀತಾರಮಾ ಶೆಟ್ಟಿ(45 ವ) ಎಮಬವರು ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಎ.28ರಂದು ನಡೆದಿದೆ.

    suicide

    ಮುಂದೆ ಓದಿ..; ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ

    ಖಾಸಗಿ ಕಂಪೆನಿಯೊಂದರಲ್ಲಿ ಕಳೆದ ಹಲವಾರು ವರ್ಷಗಳಿಂದ ಕೆಲವ ನಿರ್ವಹಿಸುತ್ತಿದ್ದ ಇವರು ಮನೆ ಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು. ಭಾನುವಾರ ಮನೆಯ ಒಳಗಡೆ ಫ್ಯಾನ್‌ವೊಂದಕ್ಕೆ ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆತ್ಮ*ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    LATEST NEWS

    ಟಿಸಿ ಕೊಟ್ಟಿಲ್ಲ ಎಂದು ಬೇಸರಗೊಂಡು ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿ ಆತ್ಮಹ*ತ್ಯೆ

    Published

    on

    ಉಡುಪಿ: ಟಿಸಿ ಕೊಟ್ಟಿಲ್ಲ ಎಂದು ಬೇಸರಗೊಂಡು ವಿದ್ಯಾರ್ಥಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

    ಬೈಂದೂರು ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ಪಾಸಾದ ವಿದ್ಯಾರ್ಥಿ ನಿತಿನ್ ಆಚಾರಿ (16 ವ) ಆತ್ಮಹ*ತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.  ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಪಿಯುಸಿ ಸೇರ್ಪಡೆಗಾಗಿ ಟಿಸಿ ಪಡೆಯಲು ಶಾಲೆಗೆ ತೆರಳಿದ್ದನು.

    Read More..; ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!

    ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಆತನನ್ನು ಬೈದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಬೇಸರಗೊಂಡ ನಿತಿನ್‌ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಗಿದೆ.

    Continue Reading

    DAKSHINA KANNADA

    ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!

    Published

    on

    ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್‌ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್‌ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.


    ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.

    ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    LATEST NEWS

    ಗುಜರಾತ್‌ ಎಟಿಎಸ್‌ನಿಂದ ನಾಲ್ವರು ಐಸಿಸ್ ಉಗ್ರರ ಸೆರೆ..!

    Published

    on

    ಮಂಗಳೂರು ( ಗುಜರಾತ್) :   ಗುಜಾರಾತ್‌ನಲ್ಲಿ ನಾಲ್ವರು ಐಸಿಸ್ ಉಗ್ರರನ್ನು ಗುಜರಾತ್ ಎಟಿಸಿ ಅಧಿಕಾರಿಗಳು ಬಂಧಿಸಿದ್ದಾರೆ.  ಅಹಮ್ಮದಾ ಬಾದ್ ವಿಮಾನ ನಿಲ್ದಾಣದಲ್ಲಿ ಈ ನಾಲ್ವರು ಉಗ್ರರನ್ನು ಎಟಿಎಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚೆನೈ ಮೂಲಕ ಅಹಮ್ಮದಾಬಾದ್ ತಲುಪಿದ್ದ ಈ ನಾಲ್ವರೂ ಮೂಲತಃ ಶ್ರೀಲಂಕದವರು ಎಂದು ಮಾಹಿತಿ ಲಭ್ಯವಾಗಿದೆ.

    ಎರಡು ವಾರಗಳ ಹಿಂದೆ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್‌ ಸ್ಫೋಟದ ಈ ಮೇಲ್‌ ಸಂದೇಶ ಬಂದಿತ್ತು. ಈ ವಿಚಾರವಾಗಿ ಎಟಿಎಸ್ ಅದಿಕಾರಿಗಳು ಹಲವು ಆಯಾಮಗಳಲ್ಲಿ ತನಿಕೆಯನ್ನು ನಡೆಸಿದ್ದರು. ಈ ತನಿಕೆಯ ಮುಂದುವರೆದ ಭಾಗವಾಗಿ ಈ ನಾಲ್ವರು ಐಸಿಸ್ ಉಗ್ರರರನ್ನು ಬಂಧಿಸಲಾಗಿದೆ. ಬಂದಿತರು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಎಟಿಎಸ್‌ಗೆ ಲಭ್ಯವಾಗಿದೆ. ಅಲ್ಲದೆ ಇವರಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ನಂಟು ಇದೆ ಅನ್ನೋ ಅಂಶ ಕೂಡಾ ಬೆಳಕಿಗೆ ಬಂದಿದೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ನಡೆಸಿದ ವೇಳೆ ಈ ವಿಚಾರ ಗೊತ್ತಾಗಿದೆ ಎಂದು ಎಟಿಎಸ್ ಮೂಲಗಳು ಬಹಿರಂಗಪಡಿಸಿದೆ.

    Continue Reading

    LATEST NEWS

    Trending