Connect with us

    DAKSHINA KANNADA

    ಬಿಜೆಪಿ ಒತ್ತಡಕ್ಕೆ ಬಗ್ಗದ ‘ಪುತ್ತೂರ ಹಿಂದೂ ಹುಲಿ’- ಏಪ್ರಿಲ್ 17 ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ..!

    Published

    on

    ಮಂಗಳೂರು: ಬಿಜೆಪಿ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ನಡೆಸಿರುವ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ನಾಮಪತ್ರ ಸಲ್ಲಿಸದಂತೆ ಸಂಘಪರಿವಾರ ಹಾಗೂ ಬಿಜೆಪಿ ಪಕ್ಷದಿಂದ ಒತ್ತಡ ಜಾಸ್ತಿಯಾಗುತ್ತಿದೆ. ಇದೆಲ್ಲದರ ಮಧ್ಯೆ ಏ.17 ರಂದು ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸಲಾಗುತ್ತಿದೆ.

    ನಿನ್ನೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿರಿಯ ನಾಯಕರು ಪುತ್ತಿಲ ಅವರ ಮನೆಗೆ ಭೇಟಿ ನೀಡಿದ್ದಾರೆಂಬ ಮಾಹಿತಿ ಇದ್ದು, ಇದಕ್ಕೂ ಮೊದಲು ಶಾಸಕ ಸಂಜೀವ ಮಠಂದೂರು ಅವರ ಮನೆಗೆ ಸುದರ್ಶನ್‌ ಭೇಟಿ ನೀಡಿದ್ದರು.

    ಪಕ್ಷದ ಹಾಗೂ ಸಂಘದ ಹಿರಿಯರ ಸೂಚನೆ ಮೇರೆಗೆ ಪುತ್ತಿಲ ಮನೆಗೆ ಭೇಟಿ ನೀಡಿದ ಮುಖಂಡರು ಮನವೊಲಿಸುವ ಕಾರ್ಯ ನಡೆಸಿದ್ದಾರೆ. ಜೊತೆಗೆ ಪಕ್ಷದ ಮುಖಂಡರ ಸಹಿತ ಸಂಘಪರಿವಾರದ ಹಿರಿಯರು ದೂರವಾಣಿ ಕರೆ ಮೂಲಕ ಮನವೊಲಿಸಿದ್ದಾರೆ.

    ಕಳೆದ ಬಾರಿ ಹೀಗೆಯೇ ಟಿಕೆಟ್‌ ತಪ್ಪಿದಾಗ  ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಪ್ರಭಾಕರ್‌ ಭಟ್‌ ಮನವೊಲಿಸಿ. ಮುಂದೆ ಪಕ್ಷದಲ್ಲಿ ಜವಾಬ್ದಾರಿ ಕೊಡುತ್ತೇವೆ ಅಂದಿದ್ದರು. ಆ ನಂತರ ಯಾರೂ ಈ ಬಗ್ಗೆ ಮಾತನಾಡಿಲ್ಲ. ಈ ಬಾರಿಯೂ ಇದೇ ವರಸೆಯಲ್ಲಿ ಮಾತನಾಡುತ್ತಿದ್ದೀರಾ ಎಂದು ಕಡ್ಡಿ ತುಂಡಾದಂತೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

    ಆದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಬಿಜೆಪಿ ನನಗೆ ಬಿಫಾರಂ ಕೊಟ್ಟರೆ ಪಕ್ಷೇತರನಾಗಿ ನಿಲ್ಲುವುದಿಲ್ಲ. ಇಲ್ಲದಿದ್ದರೆ ನನ್ನ ದಾರಿ ನನಗೆ ಎಂದಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

    ಏ.17 ರಂದು ನಾಮಪತ್ರ ಸಲ್ಲಿಕೆಗೆ ಸಿದ್ದತೆ

    ಏ.17ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, 10 ಗಂಟೆಗೆ ಪುತ್ತೂರಿನ ದರ್ಬೆ ವೃತ್ತದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತನಕ ಬೃಹತ್ ಮೆರವಣಿಗೆಯಲ್ಲಿ ತೆರಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending