Connect with us

    DAKSHINA KANNADA

    Puttur: ಸರ್ಕಾರಿ ಜಮೀನಿನಲ್ಲಿ ಅಕ್ರಮ ಮನೆ ನಿರ್ಮಾಣ-ಸಾರ್ವಜನಿಕರಿಂದ ಆಗ್ರಹ..!

    Published

    on

    ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯಲ್ಲೊಂದು ರಸ್ತೆಯ ಮಧ್ಯೆಯೇ ಅಕ್ರಮವಾಗಿ ಮನೆಯೊಂದು ನಿರ್ಮಾಣ ಹಂತದಲ್ಲಿದೆ.

    ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿ ಕುಳಿತುಕೊಳ್ಳೋದು ಸಾಮಾನ್ಯ. ಆದ್ರೆ ಇಲ್ಲೊಬ್ಬ ಸರ್ಕಾರಿ ಜಾಗದಲ್ಲಿ ಮನೆಕಟ್ಟಿದ್ದಲ್ಲದೇ, ಸಾರ್ವಜನಿಕ ರಸ್ತೆಯನ್ನೇ ಈ ಮನೆ ಆವರಿಸಿಕೊಂಡಿದೆ.

    2015 ರ ಬಳಿಕದ ಸರಕಾರಿ ಜಾಗದಲ್ಲಿ ಕಟ್ಟಿದ ಅಕ್ರಮ ಮನೆ ಮತ್ತು ಕಟ್ಟಡಗಳನ್ನು ತೆರವುಗೊಳಿಸಬೇಕೆಂಬ ಆದೇಶವಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ಇಂಥಹ ಪ್ರಕ್ರಿಯೆಗಳು ನಿರಂತರವಾಗಿ ಸಾಗುತ್ತಿದೆ.

    ನಗರ ಸಭಾ ವ್ಯಾಪ್ತಿಯ ಪಡ್ಡಾಯೂರು ಎನ್ನುವ ಪ್ರದೇಶದಲ್ಲಿ ಸರ್ಕಾರಕ್ಕೆ ಸೇರಿದ 12 ಎಕರೆ ಭೂಮಿ ಇದ್ದು, ಈ ಭೂಮಿಯನ್ನು ಅಕ್ರಮವಾಗಿ ಕಬಳಿಸಿ ಹಲವು ಮನೆಗಳು ಈ ಭಾಗದಲ್ಲಿ ನಿರ್ಮಾಣವಾಗಿವೆ.

    ಇಂತಹುದೇ ಒಂದು ಅಕ್ರಮ ಮನೆಯೊಂದು ನಿರ್ಮಾಣ ಹಂತದಲ್ಲಿದ್ದು, ಮನೆಯನ್ನು ತೆರವು ಗೊಳಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

    ಮನೆ ಇಲ್ಲದ ಬಡಪಾಯಿಗಳು ಸರಕಾರಿ ಜಾಗದಲ್ಲಿ ಮನೆ ಕಟ್ಟಿ ಕುಳಿತುಕೊಳ್ಳುವುದು ಸಾಮಾನ್ಯವಾಗಿದ್ದರೂ, ಸದ್ಯ ನಿರ್ಮಾಣವಾಗುತ್ತಿರುವ ಮನೆ ಭಾರೀ ದೊಡ್ಡ ಮಟ್ಟದ್ದಾಗಿದೆ.

    ಅಲ್ಲದೆ ಅಕ್ರಮವಾಗಿ ಮನೆ ನಿರ್ಮಿಸುವ ಜೊತೆಗೆ ಸಾರ್ವಜನಿಕರಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನೂ ಅತಿಕ್ರಮಣ ಮಾಡಿ ಮನೆ ನಿರ್ಮಿಸಲಾಗುತ್ತಿದೆ ಎನ್ನುವ ಆರೋಪವಿದೆ.

     

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲಿನ ಬೇಡಿಕೆ; ನಿಂತ ರೈಲಿನ ಪುನರಾರಂಭಕ್ಕೆ ಸಂಸತ್ ಅಧಿವೇಶನದಲ್ಲಿ ಸಂಸದ ಚೌಟ ಒತ್ತಾಯ

    Published

    on

    ನವ ದೆಹಲಿ: ಸಂಸತ್‌ನ ಮುಂಗಾರು ಅಧಿವೇಶನ ಜು.22 ರಿಂದ ಆರಂಭವಾಗಿದ್ದು, ಇದು ಲೋಕಸಭೆಯ ಎರಡನೇ ಅಧಿವೇಶನವಾಗಿದೆ. ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ನಡೆದಿದ್ದರೆ, ಈ ಅಧಿವೇಶನದಲ್ಲಿ ಪ್ರಶ್ನೋತ್ತರದ ಅವಧಿ ನೀಡಲಾಗಿದೆ. ಬಜೆಟ್ ಮೇಲಿನ ಚರ್ಚೆಯೊಂದಿಗೆ ತಮ್ಮ ಕ್ಷೇತ್ರಗಳ ಬೇಡಿಕೆಯನ್ನು ಸಂಸದರು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದ ಬ್ರಿಜೇಶ್ ಚೌಟ ಅವರು ಸಂಸತ್‌ನಲ್ಲಿ ತಮ್ಮ ಮೊದಲ ಪ್ರಶ್ನೆ ಕೇಳಿದ್ದಾರೆ.

    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ವಿದ್ಯುತ್ ಅವ*ಘಡ..!

    ಮಂಗಳೂರು- ಸುಬ್ರಹ್ಮಣ್ಯ ನಡುವಿನ ರೈಲ್ವೆ ಹಳಿಯು ಮೀಟರ್ ಗೇಜ್‌ನಿಂದ ಬ್ರಾಡ್‌ಗೇಜ್ ಪರಿವರ್ತನೆಯಾದ ಬಳಿಕ ನಿಂತು ಹೋದ ರೈಲು ಪುನರಾರಂಭಿಸಲು ಮನವಿ ಮಾಡಿದ್ದಾರೆ. ಮೀಟರ್ ಗೇಜ್ ಇದ್ದ ಸಮಯದಲ್ಲಿ ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ಯಾಸೆಂಜರ್ ರೈಲು ಸೌಲಭ್ಯ ಇದ್ದು, ಸಾಕಷ್ಟು ವಿದ್ಯಾರ್ಥಿಗಳು, ನೌಕರರು, ಈ ರೈಲಿನ ಸದುಪಯೋಗ ಪಡೆದಿದ್ದರು. ಆದ್ರೆ ಬ್ರಾಡ್ ಗೇಜ್ ಆದ ಬಳಿಕ ಈ ರೈಲು ಮಂಗಳೂರು- ಪುತ್ತೂರು ನಡುವೆ ಮಾತ್ರ ಸಂಚರಿಸುತ್ತಿದ್ದು,  ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲು ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಈ ರೈಲನ್ನು ಮತ್ತೆ ಆರಂಭಿಸಿ ಜನರಿಗೆ ರೈಲು ಸೇವೆ ಸಿಗುವಂತೆ ಮಾಡ ಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಈ ಬಗ್ಗೆ ಸಂಸದರ ಜತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

    Continue Reading

    DAKSHINA KANNADA

    ಅಗಲಿದ ಇಬ್ಬರು ಪತ್ರಕರ್ತರಿಗೆ ದ.ಕ. ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದ ಮಂಗಳೂರಿನ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿಸೋಜ ಮತ್ತು ಕ್ಯಾಮೆರಾಮ್ಯಾನ್ ಚಿಕ್ಕನರಗುಂದ ನಿವಾಸಿ ವೀರೇಶ್ ಕಡ್ಲಿಕೊಪ್ಪ ಅವರು ಇತ್ತೀಚೆಗೆ ನಿ*ಧನರಾಗಿದ್ದು, ಈ ಬಗ್ಗೆ ಶ್ರದ್ಧಾಂಜಲಿ ಸಭೆ ಇಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು.

    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಮತ್ತಿತರರು ನುಡಿ ನಮನ ಸಲ್ಲಿಸಿದರು. ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್‌. ಹಾಗೂ ಸಂಘದ ಇತರ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಒಳಗೊಂಡಂತೆ ಉಪಸ್ಥಿತರಿದ್ದ ಎಲ್ಲರೂ ಅಗಲಿದ ಇಬ್ಬರು ಪತ್ರಕರ್ತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

     

    ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಅವರು ಮಾತನಾಡಿ, ಇಬ್ಬರು ಪತ್ರಕರ್ತರ ಅಗ*ಲಿಕೆಯಿಂದ ಜಿಲ್ಲೆಯ ಮಾಧ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ. ಕ್ಯಾಮೆರಾಮ್ಯಾನ್ ವೀರೇಶ್ ತನ್ನ ಊರು ಚಿಕ್ಕ ನರಗುಂದಕ್ಕೆ ಹೋಗಿದ್ದ ವೇಳೆ ಅಲ್ಲಿ ನಿಧ*ನರಾಗಿದ್ದಾರೆ. ಅವರ ಸಾವಿನ ಬಗ್ಗೆ ಅನೇಕ ಸಂಶಯಗಳಿವೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲಾಗುವುದು. ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಈ ಕುರಿತಂತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

    ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಅವರು ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿ’ಸೋಜಾ ಆಕಸ್ಮಿಕವಾಗಿ ಹೃದಯಾಘಾ*ತದಿಂದ ನಿಧ*ನರಾಗಿರುವುದನ್ನು ಉಲ್ಲೇಖಿಸಿ, ಎಲ್ಲಾ ಪತ್ರಕರ್ತರು ಆಗಿಂದಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡುತ್ತಿರಬೇಕು. ಕೆಲಸದ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕೆಂದು ಸಲಹೆ ಮಾಡಿದರು.

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    LATEST NEWS

    Trending