Connect with us

    DAKSHINA KANNADA

    Puttur: ಕಲ್ಲೇಗ ಟೈಗರ್ಸ್‌ ಲೀಡರ್ ನ ಹತ್ಯೆ ಹಿಂದಿದೆ ರೋಚಕ ಸ್ಟೋರಿ..!

    Published

    on

    ಪುತ್ತೂರು: ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರುನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ.

    ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು.

    ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

    ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲಾವರುನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

    ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ.

    ಅಕ್ಷಯ್‌ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು . ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

    ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬ್ತು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್‌ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ ಕೇವಲ 2 ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ.

    ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ:

    ಪುತ್ತೂರು ಪೇಟೆಯಲ್ಲಿ ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ ಇದಾಗಿದೆ. ಕಳೆದ ಅಗಷ್ಟ್‌ ತಿಂಗಳ ಕೊನೆ ವಾರದಲ್ಲಿ ಪಾಗಲ್‌ ಪ್ರೇಮಿಯೊಬ್ಬ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಮುಂಭಾಗ ಯುವತಿಯನ್ನು ಚೂರಿ ಇರಿದು ಹತ್ಯೆ ಮಾಡಿದ್ದ . 4 ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಠಾಣೆಯ ಮುಂಭಾಗ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತ ಕಾರ್ತಿಕ್‌ ಮೇರ್ಲ ಎಂಬವರನ್ನು ತಡ ರಾತ್ರಿ ಚೂರಿ ಇರಿದು ಹತ್ಯೆ ಮಾಡಲಾಗಿತ್ತು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending