DAKSHINA KANNADA
ಪುತ್ತೂರು ಕೇಸರಿಮಯ, ಪುತ್ತಿಲ ಪರಿವಾರ ಆರಂಭ-ಕಾಲ್ನಡಿಗೆ ಜಾಥಾದಲ್ಲಿ ಸಾವಿರಾರು ಪುತ್ತಿಲ ಬೆಂಬಲಿಗರು
ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರಿ ಪ್ರವಾಹವೇ ಹರಿದು ಬಂದಿತ್ತು.
ಪುತ್ತೂರು: ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರಿ ಪ್ರವಾಹವೇ ಹರಿದು ಬಂದಿತ್ತು.
ಪುತ್ತೂರಿನ ಬಿಜೆಪಿ ಬಂಡಾಯದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಪಾದಯಾತ್ರೆ ಹಾಗೂ ಸೇವಾ ಸಮರ್ಪಣಾ ಕಾರ್ಯಕ್ರಮ ನಿನ್ನೆ ನಡೆಯಿತು.
ಪುತ್ತೂರಿನ ದರ್ಬೆ ವೃತ್ತದಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಚಾಲನೆ ನೀಡಿದರು.
ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆ ಜರುಗಿತು.
ಈ ಸಂದರ್ಭ ಪುತ್ತಿಲ ಪರಿವಾರ ಲಾಂಛನ ಬಿಡುಗಡೆಗೊಳಿಸಲಾಯಿತು. ಕಾಲ್ನಡಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪುತ್ತಿಲ ಬೆಂಬಲಿಗರು ಹಿಂದುತ್ವದ ಘೋಷಣೆ ಕೂಗಿದರು.
ಪುತ್ತಿಲ ಬೆಂಬಲಿಗರ ಪಾದಯಾತ್ರೆ ಬಳಿಕ ನಡೆದ ಸಭೆಯಲ್ಲಿ ಹೊಸ ಸಂಘಟನೆಯ ಲೋಕಾರ್ಪಣೆ ನಡೆಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ ಕಾರ್ಯ ನಿರ್ವಹಿಸಲಿರುವ ಪುತ್ತಿಲ ಪರಿವಾರವು ಆರ್.ಎಸ್.ಎಸ್ ನ ಗುರು ಗೋವಳ್ಕರ್ ಆಶಯದಂತೆ ಕಾರ್ಯ ನಿರ್ವಹಿಸಲಿದೆ.
ಪುತ್ತಿಲ ಪರಿವಾರದ ಬಗ್ಗೆ ಸಭೆಯಲ್ಲಿ ಮಾಹಿತಿಯನ್ನು ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ನೀಡಿದರು.
ಬಿಜೆಪಿ ಮತ್ತು ಸಂಘಪರಿವಾರದ ಜೊತೆಗೆ ಮುನಿಸಿಕೊಂಡಿರುವ ಪುತ್ತಿಲ ಮತ್ತು ಬೆಂಬಲಿಗರು ಇದೀಗ ಹೊಸ ಸಂಘಟನೆ ಕಟ್ಟಿಕೊಂಡಿದ್ದಾರೆ.
ಪಾದಯಾತ್ರೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಎಲ್ಲರೂ ಬರಿಗಾಲಲ್ಲಿ ನಡೆದುಕೊಂಡು ಬಂದರು.
ಜಾಥಾದ ಉದ್ದಕ್ಕೂ ಓಂ ನಮಃ ಶಿವಾಯ, ಮಂತ್ರಪಠಣ ಉಚ್ಛಾರಣೆ ಕೇಳಿ ಬಂದಿತ್ತು. ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.