ಪುತ್ತೂರು : ವಿದ್ಯಾರ್ಥಿನಿ ಜೊತೆ ಮಾತನಾಡಿದ ವಿಚಾರವಾಗಿ ಪುತ್ತೂರು ಕೊಂಬೆಟ್ಟು ಕಾಲೇಜಿನಲ್ಲಿ ಇತ್ತಂಡಗಳ ನಡುವೆ ನಡೆದ ಘರ್ಷಣೆ ಮುಕ್ತಾಯ ಕಾಣುತ್ತಿಲ್ಲ. ಇದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳ ಮಧ್ಯೆ ಇಂದು ಮತ್ತೆ ಹೊಡೆದಾಟ ನಡೆದಿದೆ.
ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಸೈಫುದ್ದೀನ್ ಹಾಗೂ ಇಮ್ರಾನ್ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದು ಮತ್ತಿಬ್ಬರು ವಿದ್ಯಾರ್ಥಿಗಳಾದ ಆದಿತ್ಯ, ಪ್ರಣಾಮ್ ಹಲ್ಲೆಗೊಳಗಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳು ಪುತ್ತೂರು ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಇದರಲ್ಲೂ ಕೂಡ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಒಟ್ಟಾರೆಯಾಗಿ ಕೊಂಬೆಟ್ಟು ಸರ್ಕಾರಿ ಕಾಲೇಜು ಬೂದಿ ಮುಚ್ಚಿದ ಕೆಂಡವಾಗಿದೆ.