DAKSHINA KANNADA
ಪುತ್ತೂರಿನಲ್ಲಿ ಜ.27 ರಂದು 31ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ
Published
10 months agoon
By
Adminಪುತ್ತೂರು: ಕೀರ್ತಿ ಶೇಷ ಜಯಂತ ರೈ ಅವರ ಸ್ಮರಣಾರ್ಥ ಆರಂಭಗೊಂಡ ಪುತ್ತೂರು ಕಂಬಳ 30 ವರ್ಷ ಪೂರೈಸಿ 31 ನೇ ವರ್ಷಕ್ಕೆ ಕಾಲಿಟ್ಟಿದ್ದು, ಇದೇ ಜ.27 ರಂದು ಅದ್ದೂರಿಯಾಗಿ ಸಂಭ್ರಮದಿಂದ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಅವರು ತಿಳಿಸಿದ್ದಾರೆ.
31 ನೇ ಕಂಬಳದ ಮಾಹಿತಿ ನೀಡುವ ಸಲುವಾಗಿ ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದೊಂದಿಗೆ ನಡೆಯುವ ಕಂಬಳವು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ. ಶಾಸಕ ಅಶೋಕ್ ಕುಮಾರ್ ರೈ ಸಂಚಾಲಕರಾಗಿದ್ದು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಮಾರ್ಗದರ್ಶನಲ್ಲಿ ನಡೆಯಲಿದೆ. 31 ವರ್ಷಗಳ ಹಿಂದೆ ಆರಂಭಗೊಂಡ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಈಗ ಜನಜನಿತವಾಗಿ ಪ್ರತಿಷ್ಠಿತ ಕಂಬಳವಾಗಿ ಬದಲಾಗಿದೆ, ಈ ಬಾರಿ ಸುಮಾರು 175 ರಿಂದ 200 ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು, ದೇಶ ವಿದೇಶ ಸೇರಿದಂತೆ ಲಕ್ಷಾಂತರ ಜನ ಪ್ರೇಕ್ಷಕರೂ ಕಂಬಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ನೆರವೇರಿಸಲಿದ್ದು. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಸಂಚಾಲಕ ಕೆ.ವಸಂತ ಕುಮಾರ್ ರೈ ದುಗ್ಗಳ, ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್, ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
18 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
20 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಮಂಗಳೂರು: ಟ್ರಾಯ್ನಿಂದ ಕರೆ; 1.71 ಕೋ.ರೂ ವಂಚನೆ
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ