ಪುತ್ತೂರು: ಜಾರಿ ನಿರ್ದೇಶನಾಲಯದ ಅಕ್ರಮವಾಗಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.
ಈ ಬಗ್ಗೆ ಜಾರಿ ನಿರ್ದೇಶನಾಲಯದ (ಇಡಿ)ಯ ಸಹಾಯಕ ನಿರ್ದೇಶಕ ರಿತೇಶ್ ಕುಮಾರ್, ಟ್ವೀಟ್ ಮಾಡಿದ್ದು, ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಬಿ ಬ್ಲಾಕ್‌ನಲ್ಲಿರುವ ಬೆಂಗಳೂರು ವಲಯದ ಇಡಿ ಕಚೇರಿಗೆ ಹಾಜರಾಗಿ ಇಡಿ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸ್ವೀಕರಿಸುವಂತೆ ಸೂಚಿಸಿದ್ದಾರೆ.
ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಹೇಶ್ ಕಜೆ ನೇಮಕವಾಗಿದ್ದಾರೆ.
ಉಪ್ಪಿನಂಗಡಿ ಸಮೀಪದ ಕೇದಾರ ನಿವಾಸಿಯಾಗಿರುವ ಮಹೇಶ್, ಬೊಳುವಾರು ಕಜೆ ಲಾ ಚೇಂಬರ್ಸ್ನ ಮುಖ್ಯಸ್ಥರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯ, ಜೆಸಿಐ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.