Connect with us

LATEST NEWS

ಪುತ್ತೂರು: ‘ಬರ್ತೀಯಾ’ ಅಂದನಂತೆ, ಅವರು ಅದಕ್ಕೆ ಬಂದು ಕಟ್ಟಿ ಥಳಿಸಿದ್ರು..!

Published

on

ಪುತ್ತೂರು: ಯುವಕನೋರ್ವ ಬಸ್ಸಿನಿಂದ ಇಳಿದು ಹೋಗುತ್ತಿದ್ದ ಯುವತಿಯೊಬ್ಬಳಿಗೆ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ಸಮೀಪ ನಿನ್ನೆ ನಡೆದಿದೆ.


ಬಲ್ನಾಡು ಗ್ರಾಪಂ ವ್ಯಾಪ್ತಿಯ ಸಾಜ ಪನೆತ್ತಡ್ಕ ಎಂಬಲ್ಲಿ ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಅ.20ರಂದು ಸಂಜೆ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅದೇ ದಾರಿಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಾಜ ನಿವಾಸಿಯೋರ್ವ ‘ಬರುತ್ತೀಯಾ’ ಎಂದು ಕೇಳಿದನ್ನು ಯುವತಿಯು ತನ್ನ ಮನೆಯಲ್ಲಿ ತಿಳಿಸಿದ್ದಳು.

ಆದರೆ ದಾರಿ ಮದ್ಯೆಯೇ ಆತನ ಸ್ಕೂಟರ್ ಹಾಳಾಗಿದ್ದು ಅಲ್ಲೇ ಬಿಟ್ಟು ಮನೆಗೆ ತೆರಳಿದ್ದಾನೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಮೆಕ್ಯಾನಿಕ್‌ರವರನ್ನು ಕರೆದುಕೊಂಡು ಸ್ಕೂಟರ್ ನಿಲ್ಲಿಸಿದ್ದ ಪನೆತ್ತಡ್ಕಕ್ಕೆ ಬಂದಾಗ ಸ್ಥಳದಲ್ಲಿ ಸೇರಿದವರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

ಇದೇ ವೇಳೆ ಕೆಲವರು ಆತನಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ವಿದ್ಯುತ್ ಕಂಬದಿಂದ ಬಿಡಿಸಿಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.

ಯುವಕನ ಹೆಸರು ನಾಗರಾಜ್ ಎಂದು ಹೇಳಲಾಗುತ್ತಿದೆ. ಈತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

 

Click to comment

Leave a Reply

Your email address will not be published. Required fields are marked *

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

LATEST NEWS

Trending