Connect with us

DAKSHINA KANNADA

ಪುತ್ತೂರು: ಅರುಣ್ ಕುಮಾರ್ ಪುತ್ತಿಲರಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಹಿಂದುತ್ವದ ರಕ್ಷಣೆ, ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತದ ಭರವಸೆ..!

Published

on

ಹಿಂದೂ ನೇತಾರ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಪುತ್ತೂರು: ಹಿಂದೂ ನೇತಾರ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅರುಣ್ ಪುತ್ತಿಲ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಅಂಶಗಳನ್ನು ಜಾರಿಗೆ ಎಲ್ಲಾ ಕ್ರಮಗಳನ್ನು ಶಾಸಕನಾಗಿ ಆಯ್ಕೆಯಾದರೆ ಕೈಗೊಳ್ಳುವುದಾಗಿ ಎಂದರು.

ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಕೆಲವರು ಮಾಡುತ್ತಿದ್ದು, ಈ ಬಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಣೆ-ಪ್ರಮಾಣಕ್ಕೂ ತಾನು ಸಿದ್ಧ ಎಂದರು.

ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ನಿವೃತ್ತ ತಹಸೀಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ, ರಾಜಶೇಖರ್ ಉದ್ಯಮಿ ಬನ್ನೂರು, ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪ್ರವೀಣ್ ಭಂಡಾರಿ, ಮರದಮುತ್ತು ಕೌಡಿಚ್ಚಾರ್, ಪಡೂರು ಶ್ರೀರಾಮ ಯುವಕ ಮಂಡಲದ ಲೋಕೇಶ್, ಅರುಣ್ ಇಂಡಸ್ಟ್ರೀಸ್ ಅರುಣ್ ಕುಮಾರ್ ರೈ ಡಿಂಬ್ರಿ, ಸಾಯಿಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ರಣಾಳಿಕೆ ಸಿದ್ದಪಡಿಸುವಲ್ಲಿ ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ನಥ ಶೆಟ್ಟಿ ಸಹಕರಿಸಿದರು.

DAKSHINA KANNADA

ಮಂಗಳೂರು: ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ಪ್ರಕರಣ: ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಬಂಧನ

Published

on

ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ.

ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ.

ನಗರದ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಮಸಾಜ್ ಸೆಂಟರ್‌ಗೆ ಹಿಂದೂ ಕಾರ್ಯಕರ್ತರ ಅನಿರೀಕ್ಷಿತ ದಾಳಿ; ಪೀಠೋಪಕರಣ ಧ್ವಂಸ ಮಾಡಿ ಅಟ್ಟಹಾಸ

Published

on

ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪದಲ್ಲಿ ದಾಳಿ ನಡೆಸಿ ಪಿಠೋಪಕರಣ ಧ್ವಂಸಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಲವು ಸಮಯದಿಂದ ಸೈಲೆಂಟ್ ಆಗಿದ್ದ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯ ಕಾರ್ಯಕರ್ತರು ಈ ಪುಂಡಾಟಿಕೆ ನಡೆಸಿದ್ದಾರೆ. ನಗರದ ಬಿಜೈ ಬಳಿ ಕಾರ್ಯಾಚರಿಸ್ತಾ ಇದ್ದ ಕಲರ್ಸ್ ಎಂಬ ಯುನಿಸೆಕ್ಸ್ ಸೆಲೂನ್ಗೆ ಈ ದಾಳಿ ನಡೆಸಲಾಗಿದೆ. ಪಾರ್ಲರ್ ನಲ್ಲಿ ನಾಲ್ವರು ಯುವತಿಯರಿದ್ದು ಅವರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಯುವತಿಯರು ಅಳುತ್ತಾ ಕೈ ಮುಗಿದರೂ ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ. ಪಾರ್ಲರ್ ದಾಳಿಯ ವೇಳೆ ಕಾಂಡೋಮ್ ಸಿಕ್ಕಿದ್ದು ಹಾಗಾಗಿ ಇಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಶ್ರೀರಾಮ ಸೇನೆಯ ಪಬ್ ದಾಳಿ , ಜಾಗರಣ ವೇದಿಕೆಯ ಹೋಂ ಸ್ಟೇ ದಾಳಿಯ ಮಾದರಿಯಲ್ಲೇ ಈ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಮಹಿಳೆಯರ ಜತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೆ ಪಾರ್ಲರ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪೀಠೋಪಕರಣಗಳನ್ನು ಹಾನಿ ಮಾಡಲಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉಡುಪಿಯಲ್ಲಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದಿರುವ ಗೃಹ ಸಚಿವರು ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವ್ಯಾಪಾರ ಮಾಡಲು ಎಲ್ಲರಿಗೂ ಮುಕ್ತ ಅವಕಾಶ ಇದ್ದು, ಅನೈತಿಕ ಚಟುವಟಿಕೆಯ ಅನುಮಾನ ಇದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು . ಯಾರೂ ಕಾನೂನು ಕೈಗೆ ತೆಗೆದುಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Continue Reading

DAKSHINA KANNADA

ಗಣರಾಜ್ಯೋತ್ಸವಕ್ಕೆ ದಕ್ಷಿಣಕನ್ನಡದ ಮೂವರಿಗೆ ವಿಶೇಷ ಆಹ್ವಾನ

Published

on

ಮಂಗಳೂರು : ನವದೆಹಲಿಯಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ದಕ್ಷಿಣ ಕನ್ನಡದ ಮೂವರು ಭಾಗಿಯಾಗಲಿದ್ದಾರೆ.

ಜನವರಿ 26 ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವಕ್ಕೆ ದೇಶದಾದ್ಯಂತ 127 ಮೀನುಗಾರಿಕಾ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ.

ಈ ಪೈಕಿ ರಾಜ್ಯದ ಐದು ಮೀನುಗಾರಿಕಾ ಪ್ರತಿನಿಧಿಗಳು ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕರಾವಳಿ ಅಲ್ಪ ಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ ಲತೀಫ್ ದೇರಳಕಟ್ಟೆ ಇವರನ್ನು ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಸೂರತ್‌ನ ವಜ್ರದ ವ್ಯಾಪಾರಿಯ ಮಗಳು ಗೌತಮ್ ಅದಾನಿ ಸೊಸೆ

ಸೇಂಟ್ ಜೋಸೆಫ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

76ನೇ ಗಣರಾಜ್ಯೋತ್ಸವ ಪೆರೇಡ್‌ಗೆ ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿ ಎಸ್ ಮತ್ತು 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕೆಡೆಟ್ ಸನತ್ ಕೃಷ್ಣ ಭಾಗವಹಿಸಲಿದ್ದಾರೆ.

Continue Reading

LATEST NEWS

Trending

Exit mobile version