Connect with us

    DAKSHINA KANNADA

    ಪುತ್ತೂರು : ಜೀರ್ಣೋದ್ದಾರ ನಡೆಯುತ್ತಿರುವ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ದೇವಸ್ಥಾನದಲ್ಲೊಂದು ವಿಸ್ಮಯ-ಶತಮಾನದ ಹಿಂದಿನ ತುಳಸಿ ಕೆಪ್ಲ ಹೂ ಇನ್ನು ಇದೆ ಹಸಿರು..!

    Published

    on

    ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ನಡೆಯುವ ಸಂದರ್ಭದಲ್ಲಿ ಹಿತ್ತಾಳೆಯ ಬುತ್ತಿಯಲ್ಲಿ ನೀರು ತುಳಸಿ ಕೆಪ್ಲ ಹೂ ದರ್ಬೆ ಸಿಕ್ಕಿದ್ದು ದೇವರ ಮಹಿಮೆ ಎನ್ನುವ ರೀತಿಯಲ್ಲಿ ಇನ್ನೂ ಹಚ್ಚ ಹಸಿರಾಗಿ ಇದೆ.

    ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಸುಮಾರು 8 ಕಿಲೋ ಮೀಟರ್ ದೂರದಲ್ಲಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಶ್ರೀ ಸಕಲೇಶ್ವರ ದೇವಸ್ಥಾನ ಇದ್ದು, ಇತರ ಧರ್ಮ ದೈವಗಳು ಕೂಡಾ ನೆಲೆನಿಂತ ಜಾಗವಾಗಿದೆ. 

    ಇತ್ತೀಚೆಗೆ ಊರ, ಪರವೂರಿನ ಭಕ್ತರೆಲ್ಲರೂ ಸೇರಿ ಅತ್ಯಂತ ಜೀರ್ಣಾವಸ್ಥೆಯಲ್ಲಿರುವ ಸಂಪೂರ್ಣ ಅಜೀರ್ಣವಾಗಿರುವ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ್ಯೋತಿಷ್ಯ ವಿದ್ವಾಂಸರ ಮೂಲಕ ಅಷ್ಟಮಂಗಲ, ಸ್ವರ್ಣ ಪ್ರಶ್ನೆಯನ್ನು ಇಟ್ಟು ಸುಧೀರ್ಘವಾಗಿ ಚರ್ಚಿಸಿದ್ದರು.

    ಇದರಲ್ಲಿ ಕಂಡು ಬಂದ ಪ್ರಕಾರ ಶ್ರೀ ದೇವಸ್ಥಾನವು ಅತ್ಯಂತ ಪುರಾತನವಾದ ಕ್ಷೇತ್ರವಾಗಿದೆ ಎಂದು ತಿಳಿದು ಬಂದಿದೆ.

    ಈ ಹಿನ್ನೆಲೆಯಲ್ಲಿ ಶ್ರೀ ಸಕಲೇಶ್ವರ ದೇವಸ್ಥಾನ ಬೆಳ್ಳಿಪಾಡಿಯಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ದೇವಸ್ಥಾನದ ಎದುರು ಮಹಾಬಲಿ ಪೀಠವನ್ನು ಅಗೆಯುವ ಸಂದರ್ಭದಲ್ಲಿ ಪೀಠದ ಮೇಲೆ ಕಲ್ಲಿನ ಅಡಿಯಲ್ಲಿ ಸುಮಾರು ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ನಡೆಯುವ ಸಂದರ್ಭದಲ್ಲಿ ಹಿತ್ತಾಳೆಯ ಬುತ್ತಿಯಲ್ಲಿ ನೀರು ತುಳಸಿ ಕೆಪ್ಲ ಹೂ ದರ್ಬೆ ಸಿಕ್ಕಿದ್ದು ದೇವರ ಮಹಿಮೆ ಎನ್ನುವ ರೀತಿಯಲ್ಲಿ ಇನ್ನೂ ಹಚ್ಚ ಹಸಿರಾಗಿ ಇದೆ.

    ಇದನ್ನು ಕಂಡು ದೇವಸ್ಥಾನದ ಭಕ್ತರು ಇಲ್ಲಿ ದೈವಗಳು ತಮ್ಮ ಕಾರಣಿಕವನ್ನು ತೋರಿಸಿವೆ ಎಂದು ಧನ್ಯರಾಗಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    Trending