Sunday, November 27, 2022

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ ಕಛೇರಿಗೆ ಬೆಳಗ್ಗಿನಿಂದ ಬೀಗ ಹಾಕಲಾಗಿದೆ.


ಪಿಎಫ್ಐನ ಈ ಕಛೇರಿ ಕಾಂಗ್ರೆಸ್ ಮುಖಂಡನ ಮಾಲಕತ್ವದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ ಎಂಬ ಆರೋಪವಿದೆ.


ಜೊತೆಗೆ ಯಾವುದೇ ಅಧಿಕೃತ ನಾಮಫಲಕ ಹೊಂದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಬಲ್ಲ ಮೂಲಗಳ ಪ್ರಕಾರ ಇದೇ ಕಛೇರಿಯಲ್ಲಿ ಅತ್ಯಂತ ಗುಪ್ತವಾಗಿ ಸಭೆಗಳನ್ನು ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಈ ಕಚೇರಿ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು.

LEAVE A REPLY

Please enter your comment!
Please enter your name here

Hot Topics

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...