ಪುತ್ತೂರು: ನಮ್ಮ ವ್ಯಕ್ತಿಯೊಬ್ಬ ಜೈಲಿನಲ್ಲಿದ್ದಾನೆ. ಅವನನ್ನು ಬಿಡಿಸಲು 13 ಲಕ್ಷ ಹಣ ಬೇಕು. ನೀನು 2 ದಿನದ ಒಳಗೆ 3.50 ಲಕ್ಷ ರೆಡಿ ಮಾಡಿಕೊಡಬೇಕು.
ಇಲ್ಲದಿದ್ದರೆ ನಿನ್ನ ಮತ್ತು ನಿನ್ನ ಮಕ್ಕಳನ್ನು ಜೀವ ಉಳಿಯುವುದಿಲ್ಲ ಎಂದು ಉದ್ಯಮಿಯೋರ್ವರಿಗೆ ಬೆದರಿಕೆ ಹಾಕಿದ ಇಬ್ಬರು ರೌಡಿ ಶೀಟರ್‌ಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ರೌಡಿಶೀಟರ್ ಅನ್ನು ಕಲಂದರ್ ಹಾಗೂ ಹಸನಬ್ಬ ಎಂದು ಗುರುತಿಸಲಾಗಿದೆ.
ನಮ್ಮ ವ್ಯಕ್ತಿಯೊಬ್ಬ ಜೈಲಿನಲ್ಲಿದ್ದಾನೆ. ಅವನನ್ನು ಬಿಡಿಸಲು 13 ಲಕ್ಷ ಹಣ ಬೇಕು. ನೀನು 2 ದಿನದ ಒಳಗೆ 3.50 ಲಕ್ಷ ರೆಡಿ ಮಾಡಿಕೊಡಬೇಕು. ಇಲ್ಲದಿದ್ದರೆ ನಿನ್ನ ಮತ್ತು ನಿನ್ನ ಮಕ್ಕಳನ್ನು ಜೀವ ಉಳಿಯುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ.
ಈ ವಿಚಾರ ಯಾರಲ್ಲಾದರೂ ಹೇಳಿದರೆ ಖಂಡಿತ ನಿನ್ನ ಹೆಣ ಬೀಳುತ್ತದೆ, ನೀನು ಜೀವಂತ ಬದುಕಲು ಸಾಧ್ಯವಿಲ್ಲ ಎಂದು ಪುತ್ತೂರಿನ ಉದ್ಯಮಿಗೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರನ್ವಯ ತನಿಖೆ ನಡೆಸಿದ ಪೊಲೀಸರು ಇಬ್ಬರು ರೌಡಿ ಶೀಟರ್ ಗಳನ್ನು ಬಂಧಿಸಿದ್ದಾರೆ.
ಉದ್ಯಮಿಯಿಂದ ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ ಹಣದ ಬೇಡಿಕೆಯಿಟ್ಟ ಅಪರಿಚಿತರಿಗೆ ಉದ್ಯಮಿಯ ಮೂಲಕವೇ ಹಣದ ನೀಡುವ ಕುರಿತು ಮಾತುಕತೆ ನಡೆಸಿ ಕುರಿಯ ಸಮೀಪವೇ ಹಣ ನೀಡುವ ಸ್ಥಳ ನಿಗದಿ ಪಡಿಸಿದ್ದರು. ಹಾಗೆ ಜ.14 ರಂದು ಆರೋಪಿಗಳು ಕಾರಿನಲ್ಲಿ ಬಂದು ಕುರಿಯ ಸಮೀಪ ಉದ್ಯಮಿಯಿಂದ ಹಣ ಪಡೆದು ಹೋಗುತ್ತಿದ್ದಂತೆ ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದ ತಂಡ ಆರೋಪಿಗಳನ್ನು ಸುತ್ತುವರಿದು ಬಂಧಿಸಿದ್ದಾರೆ.
ಇದೀಗ ಉದ್ಯಮಿಯಿಂದ ವಸೂಲಿ ಮಾಡಿದ ರೂ 50 ಸಾವಿರ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಾಣೆ ಮತ್ತು ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಗೆ ರವರ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ಉದಯರವಿ ಎಂ.ವ, ಅಮೀನ್ ಸಾಬ್ ಎಂ ಅತ್ತಾರ್, ಹಾಗೂ ಸಿಬ್ಬಂದಿ ಕೃಷ್ಣಪ್ಪ, ದೇವರಾಜ್, ಅದ್ರಾಮ, ಪ್ರವೀಣ್ ರೈ, ಹರ್ಷಿತ್, ಗಾಯತ್ರಿ, ವಿನೋದ್ ರವರು ಭಾಗಿಯಾಗಿದ್ದರು.