ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿ ತಾಲೂಕಿನ ಒಳಮೊಗ್ರು ಗ್ರಾಮದ ಶಾಫಿ ಆಯ್ಕೆ ಯಾನ ಇಬ್ರಾಹಿಂ ಇ.ಎ.ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
354ರಡಿ ಅಪರಾಧಕ್ಕೆ ವರ್ಷ ಸಾದಾ ರೂಪದ ಶಿಕ್ಷೆ ಮತ್ತು ರೂ. 5,000 ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳು ಸಾಲ ಸ್ವರೂಪದ ಶಿಕ್ಷೆ, 448ರಡಿ ಅಪರಾಧಕ್ಕೆ 6 ತಿಂಗಳು ಸಾದಾ ಸ್ವರೂಪದ ಶಿಕ್ಷೆ ಮತ್ತು ರೂ. 1,000 ದಂಡ, ದಂಡ ತರಲು ತಪ್ಪಿದ್ದಲ್ಲಿ 1 ತಿಂಗಳ ಸಾದಾ ಸ್ವರೂಪದ ಶಿಕ್ಷೆ ಮತ್ತು 7, 8, 11, 12ರ ಕಾಯ್ದೆಯಡಿ ಅಪರಾಧಕ್ಕೆ 3 ವರ್ಷ ಸಾದಾ ಸ್ವರೂಪದ ಶಿಕ್ಷೆ ಮತ್ತು ರೂ. 10,000 ದಂಡ, ಈ ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಸ್ವರೂಪದ ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. ಮಾತ್ರವಲ್ಲದೆ, ಒಟ್ಟು ದಂಡದ ಮೊತ್ತ ರೂ. 16,000ರಲ್ಲಿ ರೂ. 15,000ವನ್ನು ಬಾಲಕಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಾಫಿ ಆಡ್ಕ ಯಾನ ಇಬ್ರಾಹಿಂ ಎಂಬಾತನ ವಿರುದ್ಧ ಅಂದಿನ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ರವಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿ, ನ್ಯಾಯಾಲಯದಲ್ಲಿ ವಿವರವಾದ ಸಾಕ್ಷ ನುಡಿದಿದ್ದರು. ಒಟ್ಟು 11 ಸಾಕ್ಷಿಗಳನ್ನು ವಿಚಾರಗ ಮಾಡಲಾಗಿದೆ. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.