Connect with us

    DAKSHINA KANNADA

    ಪುತ್ತೂರು ದರೋಡೆ ಪ್ರಕರಣ: 6 ಮಂದಿ ಸೆರೆ- ಜೈಲಿನಲ್ಲಿದ್ದು, ಪರಿಚಿತರಾದ ಆರೋಪಿಗಳು..!

    Published

    on

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಸೆ. 7 ರಂದು ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು, ಕೇರಳ ಮೂಲದ ಐವರು ಮತ್ತು ಕರ್ನಾಟಕದ ಒಬ್ಬರು ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿ ದರೋಡೆ ಮಾಡಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಈ ಕುರಿತಂತೆ ಪುತ್ತೂರು ಎಎಸ್‍ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿ, ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿ ಗ್ರಾಮದ ಕಿಣಿಯರ ಪಾಲು ನಿವಾಸಿ ಸುಧೀರ್ (38), ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಪೈವಳಿಕೆ ಸಮೀಪದ ಅಟ್ಟೆಗೋಳಿ ಮಂಜಳ್ತೋಡಿ ನಿವಾಸಿ ಕಿರಣ್ ಟಿ (29), ಕಾಂಞಗಾಡ್ ಸಮೀಪದ ಮೂವರಿಕುಂಡ ಕಂಡತ್ತಿಲ್ ವೀಡು ನಿವಾಸಿ ಸನಾಲ್ ಕೆ.ವಿ (34), ಸೀತಂಗೋಳಿ ಸಮೀಪದ ಎಡನಾಡು ಗ್ರಾಮದ ಮುಗು ನಿವಾಸಿ  ಫೈಝಲ್ (37), ಸೀತಂಗೋಳಿಯ ಅಬ್ದುಲ್ ನಿಝಾರ್ (21)ಮತ್ತು ಮಂಜೇಶ್ವರ ತಾಲೂಕಿನ ಶೇಣಿ ಗ್ರಾಮದ ಹೊಸಗದ್ದೆ ನಿವಾಸಿ  ವಸಂತ ಎಂ. (31) ಬಂಧಿತರು.

    ಆರೋಪಿಗಳಾದ ಕಿರಣ್ ಟಿ, ಸುಧೀರ್ ಕುಮಾರ್ ಮಣಿಯಾಣಿ, ಸನಾಲ್ ಕೆ.ವಿ. ಅವರನ್ನು ಗುರುವಾರ ರಾತ್ರಿ ಪುತ್ತೂರು ತಾಲೂಕಿನ ನಿಡ್ಪಳ್ಳಿಯಲ್ಲಿ ಬಂಧಿಸಲಾಗಿದ್ದು, ಉಳಿದಂತೆ ಫೈಝಲ್, ನಿಝಾರ್ ಮತ್ತು ವಸಂತ ಅವರನ್ನು ಶುಕ್ರವಾರ ಕಾಸರಗೋಡು ಜಿಲ್ಲೆಯ ಮುನಿಯಂಪಾಲ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ.

    ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, ಕಾರಿನಲ್ಲಿದ್ದ ಚೂರಿ, ಕಬ್ಬಿಣದ ರಾಡ್, ತಲುವಾರು, ಬೈಕ್ ಹಾಗೂ ದರೋಡೆ ಮಾಡಿರುವ ಚಿನ್ನದ ಬಳೆ, ಚೈನು ಮತ್ತು ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

    ಈ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿ ಕಾಸರಗೋಡಿನ ಕಯ್ಯಾರ್‌ ಸಮೀಪದ ಪಚ್ಚಂಬಳ ನಿವಾಸಿ ರವಿ ಕೇರಳದ ಜೈಲಿನಲ್ಲಿದ್ದಾನೆ.

    ಬಂಧಿತರಾದ ಎಲ್ಲಾ 6 ಮಂದಿ ಆರೋಪಿಗಳೂ ಕ್ರಿಮಿನಲ್ ಹಿನ್ನಲೆ ಉಳ್ಳವರು. ಕೇರಳ ಜೈಲ್‍ನಲ್ಲಿದ್ದ ಸನಾಲ್ ಮೇಲೆ 15 ಕೇಸುಗಳಿವೆ.

    ಸುಧೀರ್‌ ಮೇಲೆ 2 ಪ್ರಕರಣಗಳಿವೆ.

    ವಸಂತನ ಮೇಲೆ 4 ಕೇಸುಗಳಿವೆ, ಕಿರಣ್ ಮತ್ತು ಫೈಸಲ್ ಮೇಲೆ ತಲಾ 3 ಕೇಸುಗಳಿವೆ ಹಾಗೂ ನಿಸಾರ್ ಮೇಲೆ 2 ಕೇಸುಗಳಿವೆ.

    ಆರೋಪಿ ರವಿ ಜಬ್ಬಾರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಲ್ಲಿರುವ ಈತ ಪೆರೋಲ್‍ನಲ್ಲಿ ಜೈಲಿನಿಂದ ಹೊರ ಬಂದ ವೇಳೆ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ.

    ಕೃತ್ಯ ನಡೆಸಿದ ಬಳಿಕ ಪೆರೋಲ್ ಮುಗಿದು ಮತ್ತೆ ಜೈಲು ಸೇರಿಕೊಂಡಿದ್ದಾನೆ.

    ಬಾಡಿ ವಾರಂಟ್ ಹೊರಡಿಸಿ ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಪ್ರಕರಣದ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂದರು.

    ಇವರೆಲ್ಲರೂ ಜೈಲ್‍ನಲ್ಲಿ ಪರಿಚಯವಾಗಿ ಬಳಿಕ ಒಟ್ಟಾಗಿ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ.

    ಸಾಕಷ್ಟು ಪೂರ್ವತಯಾರಿ ನಡೆಸಿ ದರೋಡೆ ನಡೆಸಲಾಗಿತ್ತು.

    ಆರೋಪಿಗಳೇ ದಾರ ಮತ್ತು ಬಟ್ಟೆಯನ್ನು ತಂದು ಮನೆಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದರು.

    ಬಹಳಷ್ಟು ತಾಂತ್ರಿಕವಾಗಿ ಕೃತ್ಯ ಎಸಗಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್‍ಪಿ ನೇತೃತ್ವದಲ್ಲಿ ಇನ್ಸ್‌ ಪೆಕ್ಟರ್ ರವಿ ಅವರನ್ನು ಒಳಗೊಂಡ ತಂಡವನ್ನು ರಚಿಸಿ ಪತ್ತೆಗೆ ಪ್ರಯತ್ನ ನಡೆಸಲಾಗಿತ್ತು ಎಂದು ತಿಳಿಸಿದರು.

    ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ನಗದು ಬಹುಮಾನ ಮತ್ತು ಉತ್ತಮ ಸೇವಾ ಪತ್ರ ನೀಡಿ ಎಸ್‍ಪಿ ರಿಷ್ಯಂತ್‌ ಅವರು ಗೌರವಿಸಿದರು.

    ಈ ಸಂದರ್ಭದಲ್ಲಿ ಡಿವೈಎಸ್‍ಪಿ ಗಾನ ಪಿ ಕುಮಾರ್, ಗ್ರಾಮಾಂತರ ಸರ್ಕಲ್ ಇನ್ಸ್‍ಪೆಕ್ಟರ್ ರವಿ. ಬಿ.ಎಸ್, ನಗರ ಠಾಣೆಯ ಎಸ್‍ಐ ಉದಯ ರವಿ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ

    Published

    on

    ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.


    ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.


    ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.

    Continue Reading

    DAKSHINA KANNADA

    ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    Published

    on

    ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

    ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

    Continue Reading

    DAKSHINA KANNADA

    ಮಂಗಳೂರು – ರೌಡಿಗಳಂತೆ ಫೈಟ್ ಮಾಡಿಕೊಂಡ ಬಸ್ ಸಿಬ್ಬಂದಿ; ವಿಡಿಯೋ ವೈರಲ್

    Published

    on

    ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ.

    ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪ್ರಯಾಣಿಕರು ತಿಳಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್‌ಗಳ ಸಿಬ್ಬಂದಿಯ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬನ್ ಸಿಬ್ಬಂದಿಗಳು ಅನಾಗರಿಕರಾಗಿದ್ದಾರೆಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
    ಬಸ್ ವ್ಯವಸ್ಥೆ ಸಾರ್ವಜನಿಕ ಸೇವೆಯೆಂಬುದು ಇಂದಿನವರಿಗೆ ತಿಳಿದಿಲ್ಲವಾಗಿದೆ. ತಮ್ಮದೇ ಸಾಮ್ರಾಜ್ಯ, ತಾವು ಮಾಡಿದ್ದೇ ಆಟ, ನಾವು ನಡೆದಿದ್ದೇ ದಾರಿ ಎಂಬುದನ್ನು ತಿಳಿದಿರುವ ಇಂತಹ ಸಿಬ್ಬಂದಿಯ ಸಮಾಜ ಕಂಟಕ ವರ್ತನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.


    ‘ಇಂತಹ ಅನಾಗರಿಕ ವರ್ತನೆಯಿಂದ ಮಹಿಳೆಯರು , ಪುಟ್ಟ ಮಕ್ಕಳು ಬಸ್ಸಿನಲ್ಲಿ ಹೋಗಲು ಹಿಂದೇಟು ಹಾಕುವಂತಾಗಿದೆ. ಅಲ್ಲದೆ ಬಸ್ಸಿನ ಸಿಬ್ಬಂದಿಗಳನ್ನು ಅರ್ಧದಾರಿಯಲ್ಲೇ ಇಳಿಸಿ ಅವರನ್ನು ಅತಂತ್ರರನ್ನಾಗಿಸುವ ಕ್ರಮ ಸರಿಯಲ್ಲ. ಬೇರೆ ಬಸ್ಸು ಇಲ್ಲದೇ ಅವರು ಕಂಗೆಡುವ ಪರಿಸ್ಥಿತಿ ಕೂಡಾ ಇರುವ ಕಾರಣ ಇಂತಹ ಬಸ್ಸು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    ಈ ಕುರಿತ ವಿಡಿಯೋ ಫುಲ್ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶಿಸುತ್ತಿದ್ದಾರೆ.

     

    ವಿಡಿಯೋ ನೋಡಿ :

     

     

    Continue Reading

    LATEST NEWS

    Trending