Connect with us

DAKSHINA KANNADA

Puttur: ಡಿವೈಎಸ್ಪಿ ಡಾ ಗಾನಾ ಪಿ ಕುಮಾರ್ ವರ್ಗಾವಣೆ

Published

on

ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ಗಾನಾ ಪಿ ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ ಗಾನಾ ಕುಮಾರ್‌ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು. ಬಳಿಕ ಅವರ ವರ್ಗಾವಣೆಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು. ಪುತ್ತೂರಿನಲ್ಲಿ ನಡೆದ ಬ್ಯಾನರ್ ಪ್ರಕರಣವೊಂದಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದ ಆರೋಪದಲ್ಲಿ ಪುತ್ತೂರಿನ ಆಗಿನ ಡಿವೈಎಸ್ಪಿ ಡಾ ವೀರಪ್ಪ ಹಿರೇಮಠ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿದ್ದ ಸಂದರ್ಭದಲ್ಲಿ ಪ್ರಭಾರ ಡಿವೈಎಸ್ಪಿಯಾಗಿ ಡಾ ಗಾನಾ ಪಿ ಕುಮಾರ್ ಅವರನ್ನು ನಿಯೋಜಿಸಲಾಗಿತ್ತು. ಬಳಿಕ ಅವರನ್ನೇ ಪುತ್ತೂರು ಡಿವೈಎಸ್ಪಿಯಾಗಿ ಮುಂದುವರಿಸಲಾಗಿತ್ತು. ಇದೀಗ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೇಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

DAKSHINA KANNADA

Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!

Published

on

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ  ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್‌ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

LATEST NEWS

Trending