DAKSHINA KANNADA
Puttur: ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ ನಿಧನ..!
ಪೆರುವೋಡಿ: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ (95) ಮಂಗಳವಾರದಂದು ನಿಧನರಾದರು.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ ಪ್ರಸಿದ್ಧ ಧರ್ಮಸ್ಥಳ ಮೇಳಕ್ಕೆ ಸೇರಿ ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ.
ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದ ನಾರಾಯಣ ಭಟ್ ಅವರು ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ, ಮಾನ್ಯತೆ ತಂದು ಕೊಟ್ಟಿದ್ದಾರೆ. ‘ಪಾಪಣ್ಣ ವಿಜಯ’ ಪ್ರಸಂಗದ ಪಾಪಣ್ಣ ಪಾತ್ರದ ವಿನ್ಯಾಸ ಹಾಗೂ ಪಾತ್ರಾಭಿವ್ಯಕ್ತಿಯ ಮೂಲಕ ತಮ್ಮ ಕಲ್ಪನಾಶಕ್ತಿಯನ್ನು ಪ್ರದರ್ಶಿಸಿ ಜನಮನ್ನಣೆ ಗಳಿಸಿದ್ದಾರೆ.
ದಮಯಂತಿ ಪುನರ್ ಸ್ವಯಂವರ ಪ್ರಸಂಗದ ಬಾಹುಕ ಪಾತ್ರಕ್ಕೆ ಹೊಸ ರೂಪ ನೀಡಿದ್ದಾರೆ. ಪೌರಾಣಿಕ ಪ್ರಸಂಗದ ಬಹುತೇಕ ಎಲ್ಲಾ ಪಾತ್ರಗಳಲ್ಲೂ ಸ್ವಂತಿಕೆಯ ಮೇಲ್ಮೆ ಅವರದಾಗಿದ್ದು, ತುಳು ಪ್ರಸಂಗಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ವಿವಿಧ ಮೇಳಗಳಲ್ಲಿ ತಿರುಗಾಟ ಮಾಡಿದ ಅನುಭವಿ. ಮೂಲ್ಕಿ ಮೇಳದ ಯಜಮಾನಿಕೆ ನಡೆಸಿದ್ದ ಸಂಘಟನಾ ಚತುರರೂ ಹೌದು. ಪೆರುವೋಡಿಯವರ ಕಲಾ ಬದುಕಿನ ಚಿತ್ರಣ-ಹಾಸ್ಯಗಾರನ ಅಂತರಂಗ ಪುಸ್ತಕವನ್ನು ಪುತ್ತೂರಿನ ಕರ್ನಾಟಕ ಸಂಘ ಪ್ರಕಟಿಸಿದೆ. ಹಲವಾರು ಸಂಘ ಸಂಸ್ಥೆಗಳ ವಿವಿಧ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್