Friday, July 1, 2022

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆ-ಕಾವು ಕೊಟ್ಟು ಕಾಡಿಗೆ ಬಿಟ್ಟ ಉರಗ ತಜ್ಞ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.


ನಗರದ ಡೊಂಗರಕೇರಿಯ ವೆಂಕಟರಮಣ ದೇವಸ್ಥಾನದ ಎದುರು ಶಮಿತ್ ಸುವರ್ಣ ಎಂಬವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ‌ಹೆಬ್ಬಾವಿನ ಮೊಟ್ಟೆಗಳು ಪತ್ತೆಯಾಗಿತ್ತು.

ಈ ಕುರಿತು ಅವರು ಉರಗ ತಜ್ಞ ಅಜಯ್ ಅವರಿಗೆ ಮಾಹಿತಿ ನೀಡಿದರು.ತಕ್ಷಣ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಅಜಯ್ ಅವರು ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ಕೊಟ್ಟಿದ್ದಾರೆ.

ಮೊಟ್ಟೆಯಿಂದ 8 ಮರಿಗಳು ಹೊರಬಂದಿದ್ದು, ಅವುಗಳನ್ನು ರಕ್ಷಣೆ ಮಾಡಿ ಬಂಟ್ವಾಳದ ದಟ್ಟ ಕಾಡಿಗೆ ಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್.‌ಪೂಜಾರಿ, ಅರಣ್ಯ ರಕ್ಷಕ ಶೋಬಿತ್ ರಾಜ್, ಅಜಯ್, ಉರಗ ರಕ್ಷಕ ಸ್ನೇಕ್ ಕಿರಣ್ ,ವಾಹನ ಚಾಲಕ ಜಯರಾಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...