Wednesday, December 1, 2021

ನೈತಿಕ ಪೊಲೀಸ್‌ಗಿರಿ ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯಾ?: ಡಿಕೆಶಿವಕುಮಾರ್‌ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್​ ಗಿರಿ ಪ್ರಕರಣಗಳು ಅಧಿಕವಾಗುತ್ತಲೆ ಇದೆ. ಈ ಮಧ್ಯೆ ಒಂದು ಪ್ರಶ್ನೆ ವಿಡಿಯೋ ಸರಣಿಯ ಮೂಲಕ ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಂದು ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯನ್ನು ಈ ವಿಡಿಯೋ ಸರಣಿಯಲ್ಲಿ ಖಂಡಿಸಿದ್ದಾರೆ.


ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ, “ಸಂವಿಧಾನಬದ್ಧ ಪ್ರಜಾಪ್ರಭುತ್ವದ ನೆರಳಲ್ಲಿ ನಾವೆಲ್ಲ ಸ್ವತಂತ್ರವಾಗಿ ಬದುಕುತ್ತಿದ್ದೇವೆ. ನಮ್ಮಿಷ್ಟದಂತೆ ಬದುಕುವ ಹಕ್ಕನ್ನು ಸಂವಿಧಾನ ನಮ್ಮೆಲ್ಲರಿಗೂ ನೀಡಿದೆ.

ನಿಮ್ಮ ಬದುಕಿನ ಹಕ್ಕಿನ ಬಗ್ಗೆ ಮಾತನಾಡಲು ನಿಮ್ಮ ಮುಂದೆ ನಿಂತಿದ್ದೇನೆ” ಎಂದು ಅವರು ಮಾತು ಆರಂಭಿಸಿ ಮತೀಯ ಗೂಂಡಾಗಿರಿಯನ್ನು ಪ್ರಶ್ನಿಸಿದ್ದಾರೆ.
“ನೈತಿಕ ಪೊಲೀಸ್‌ಗಿರಿ ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯಾ? -ಇದು ಈ ವಾರ ನಾನು ನಿಮ್ಮ ಮುಂದೆ ಇಡುತ್ತಿರುವ ಪ್ರಶ್ನೆ” ಎಂದಿದ್ದಾರೆ.
“ಜನರು ಬಿಜೆಪಿಯ ಸಿದ್ಧಾಂತದಂತೆಯೇ ಬದುಕಬೇಕೆಂದು ಸರ್ಕಾರ ಬಯಸುತ್ತಿದೆ. ಮಹಿಳೆಯರ ಹಕ್ಕನ್ನೇ ಕಿತ್ತಿಕೊಳ್ಳಲು ಪ್ರಯತ್ನಿಸುತ್ತಿದೆ.

ಯುವಜನರನ್ನು ಹಿಂಸಾತ್ಮಕ ದಾರಿಗೆ ದೂಡಲಾಗುತ್ತಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ವೇಷವನ್ನು ಹರಡುವ ಕೆಲಸವನ್ನು ಮುಖ್ಯಮಂತ್ರಿಯವರು ಸಮರ್ಥಿಸಿಕೊಳ್ಳಬಾರದು. ಒಂದು ವೇಳೆ ಅವರು ಇದನ್ನು ಸಮರ್ಥಿಸಿಕೊಂಡರೆ, ನಾಳೆ ನೀವು ಯಾವ ಯಾವ ಬಟ್ಟೆ ಧರಿಸಬೇಕು, ಯಾವುದರಲ್ಲಿ ಕಾಫಿ ಕುಡಿಯಬೇಕು

ಎಂಬುದನ್ನು ಬಿಜೆಪಿ ಸ್ನೇಹಿತರು ನಿರ್ಧಾರ ಮಾಡುತ್ತಾರೆ” ಎಂದು ಎಚ್ಚರಿಸಿರುವ ಅವರು, ಜನರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಕೋರಿದ್ದಾರೆ

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...