Connect with us

    LATEST NEWS

    ಹರಿಕೃಷ್ಣ ಬಂಟ್ವಾಳ್‌ ನೀವು ಎಲ್ಲಿಯಾದ್ರೂ ನನ್ನನ್ನು ಪಕ್ಷದ ಸಭೆಯಲ್ಲಿ ನೋಡಿದ್ರಾ: ಪದ್ಮರಾಜ್‌ ತಿರುಗೇಟು

    Published

    on

    ಮಂಗಳೂರು: ಹರಿಕೃಷ್ಣ ಬಂಟ್ವಾಳ್‌ ಅವರೇ ನೀವು ಎಲ್ಲಿಯಾದರೂ ನನ್ನನ್ನು ಪಕ್ಷದ ಸಭೆ ಸಮಾರಂಭಗಳಲ್ಲಿ ನೋಡಿದ್ದೀರಾ?. ನನಗೆ ಬ್ರಹ್ಮರ್ಷಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಆಡಳಿತ ಸಮಿತಿ ಖಜಾಂಚಿ, ವಕೀಲ ಆರ್‌ ಪದ್ಮರಾಜ್‌ ತಿರುಗೇಟು ನೀಡಿದ್ದಾರೆ.


    ಈ ಬಗ್ಗೆ ನಮ್ಮ ಕುಡ್ಲ ವಾಹಿನಿಗೆ ಪ್ರತಿಕ್ರಿಯಿಸಿದ ಅವರು, ಹರಿಕೃಷ್ಣ ಬಂಟ್ವಾಳ್ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಷ್ಟ ಪಡೋದಿಲ್ಲ.

    ರಾಜ್ಯ ಸರಕಾರವು ಗುರುಗಳ ಪಾಠವನ್ನು ಪುಸ್ತಕದಿಂದ ತೆಗೆದು ಹಾಕಿರುವುದು ಕರ್ನಾಟಕ ರಾಜ್ಯ ಸರಕಾರದ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ದೃಢಪಟ್ಟಿದೆ.

    ಶಿಕ್ಷಣ ಇಲಾಖೆ ವೆಬ್‌ಸೈಟ್‌ನಿಂದ ಪರಿಷ್ಕರಣೆ ಮಾಡಲಾದ ವಿಚಾರವನ್ನು ಡೌನ್‌ಲೋಡ್ ಮಾಡಿ ಪರಿಶೀಲಿಸಿದಾಗ 2021ರ ಪಠ್ಯಪುಸ್ತಕ ಹಾಗೂ ಪರಿಷ್ಕರಣೆಗೊಂಡ ಪುಸ್ತಕವನ್ನು ಪರಿಷ್ಕರಣೆ ಮಾಡಿದಾಗ ನಾರಾಯಣ ಗುರುಗಳ ಬಗ್ಗೆ ಅಧ್ಯಯನ 2022ರ ಪಠ್ಯಪುಸ್ತಕದಲ್ಲಿ ಇರುವುದು ಕಂಡು ಬಂದಿಲ್ಲ. ಈ ಬಗ್ಗೆ ನಾನು ಪತ್ರಿಕಾ ಪ್ರಕಟಣೆ ನೀಡಿದ್ದು ಹೌದು.

    ಆದ ಲೋಪವನ್ನು ಸರಿಪಡಿಸುವಂತೆ ಹೇಳಿದ್ದೇನೆ. ಆದರೆ ಜವಾಬ್ದಾರಿಯುತ ಶಿಕ್ಷಣ ಸಚಿವ ನಾಗೇಶ್ ಅವರು ಪಠ್ಯಪುಸ್ತಕ ಪ್ರಿಂಟ್ ಆದ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಬೇಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದನ್ನು ನಾನು ಖಂಡಿಸಿದ್ದೇನೆ.

    ಜವಾಬ್ದಾರಿ ಮಂತ್ರಿಯಾಗಿದ್ದು ಈ ರೀತಿ ಅವರ ಹೇಳಿಕೆ ಸರಿಯಲ್ಲ. ಸಚಿವರಾದ ಸುನಿಲ್‌ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದಾರೆ.

    ಅದಕ್ಕೆ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದರು.

    ಹರಿಕೃಷ್ಣ ಬಂಟ್ವಾಳ್‌ಗೆ ತಿರುಗೇಟು
    ಹರಿಕೃಷ್ಣ ಬಂಟ್ವಾಳ್‌ ಬಗ್ಗೆ ಗೌರವ ಇದೆ. ನೀವು ಹಿರಿಯರು. ನೀವು ಬಿಲ್ಲವ ಸಮಾಜದ ನಾಯಕರು. ನೀವು ಕಾಂಗ್ರೆಸ್ ಪಕ್ಷದಲ್ಲಿದ್ದವರು. ಈಗ ಬಿಜೆಪಿಯಲ್ಲಿದ್ದೀರಿ. ಪಕ್ಷಕ್ಕೆ ತಕ್ಕ ಹಾಗೆ ಮಾತನಾಡ್ತೀರಿ. ನೀವು ಆತ್ಮವಂಚನೆ ಮಾಡಬೇಡಿ.

    ಬಿಲ್ಲವ ಸಮುದಾಯವನ್ನು ತಪ್ಪು ಹಾದಿಗೆ ಎಳೆಯಬೇಡಿರಿ. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಯಾಕೆ ರಾಜಕೀಯ ಮಾಡ್ತೀರಿ ಸ್ವಾಮೀ… ನನಗೆ ಲಾಬಿ ಮಾಡುವ ಅಗತ್ಯ ಇಲ್ಲ. ನಾನು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಾನು ರಾಜಕೀಯ ಮಾಡುವುದಿಲ್ಲ.

    ನೀವು ಎಲ್ಲಿಯಾದರೂ ಪಕ್ಷದ ಸಭೆ ಸಮಾರಂಭಗಳಲ್ಲಿ ನನ್ನನ್ನು ನೋಡಿದ್ದೀರಾ..? ನನಗೆ ಬ್ರಹ್ಮರ್ಷಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ಅಂತಹ ಕೆಲಸವನ್ನು ನನ್ನ ಕೊನೆ ಉಸಿರು ಇರೋ ತನಕ ಮಾಡುವುದಿಲ್ಲ.

    ಹಾಗಂತ ನಾನು ಏನಾದರೂ ರಾಜಕೀಯಕ್ಕೆ ಹೋಗಬಾರದು ಏನಾದರೂ ಡಿಸ್‌ ಕ್ವಾಲಿಫಿಕೇಶನ್‌ ಇದೆಯೇ? ನನಗೂ ನನ್ನದೇ ಆಗಿರುವ ಸಿದ್ಧಾಂತಗಳಿವೆ.
    ಲೇಡಿಹಿಲ್‌ ವೃತ್ತಕ್ಕೆ ನಾರಾಯಣ ಗುರು ಹೆಸರಿಡುವ ಬಗ್ಗೆ ವಿರೋಧಿಸಿದವರಲ್ಲಿ ಮೊದಲಿಗ ಪದ್ಮರಾಜ್‌ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲೇಡಿಹಿಲ್‌ ವೃತ್ತಕ್ಕೆ ಹೆಸರಿಡುವ ವಿಚಾರದಲ್ಲಿ ನಾನ್ಯಾವತ್ತೂ ವಿರೋಧಿದ್ದೇ ಆದರೆ ಇವತ್ತೇ ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending