DAKSHINA KANNADA
ತುಳು ಸಿನಿಮಾ ರಂಗದ ಯುವ ನಿರ್ದೇಶಕ ರಘು ಶೆಟ್ಟಿ ಅಸ್ತಂಗತ !
ಮಂಗಳೂರು:ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ರಘು ಶೆಟ್ಟಿ ಅವರು ಶನಿವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮೂಡಬಿದಿರೆ ಮೂಲದ ರಘು ಶೆಟ್ಟಿ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.ಈ ಹಿಂದೆ ರಘು ಶೆಟ್ಟಿ ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗದಲ್ಲಿದ್ದರು
.
ಬಳಿಕ ರಘು ಶೆಟ್ಟಿ ತುಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ‘ಅರ್ಜುನ್ ವೆಡ್ಸ್ ಅಮೃತ’ ಎಂಬ ತುಳು ಚಿತ್ರವನ್ನು ರಘು ಶೆಟ್ಟಿ ನಿರ್ದೇಶಿಸಿದ್ದಾರೆ.ಜೊತೆಗೆ ಹೋಟೆಲ್ ಉದ್ಯಮಕ್ಕೂ ರಘು ಶೆಟ್ಟಿ ಕೈ ಹಾಕಿದ್ದರು.ಮೂಡುಬಿದಿರೆಯ ಬಂಟ ಕುಟುಂಬದಲ್ಲಿ ಸೆಪ್ಟೆಂಬರ್ 1, 1979 ರಲ್ಲಿ ಜನಿಸಿದ ರಘು ಶೆಟ್ಟಿ ಬೆಳೆದಿದ್ದೆಲ್ಲ ಹುಬ್ಬಳ್ಳಿಯಲ್ಲಿ.
ಇವರ ತಂದೆ ಉದ್ಯಮಿ. ಮೂಡುಬಿದಿರೆಯ ಮಹಾವೀರ ಕಾಲೇಜ್ನಲ್ಲಿ ವ್ಯಾಸಂಗ ಮಾಡಿದ ರಘು ಶೆಟ್ಟಿಗೆ ಸಿನಿಮಾಗಳ ಬಗ್ಗೆ ಅಪಾರ ಆಸಕ್ತಿ ಇತ್ತು.ಅರ್ಜುನ್ ವೆಡ್ಸ್ ಅಮೃತ’ ಚಿತ್ರದ ಮೂಲಕ ಕೋಸ್ಟಲ್ವುಡ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ರಘು ಶೆಟ್ಟಿ ಕನ್ನಡ ಚಿತ್ರವೊಂದನ್ನು ನಿರ್ದೇಶಿಸಲು ಸಕಲ ತಯಾರಿ ನಡೆಸಿದ್ದರು.
ಇದಕ್ಕಾಗಿ ನಟ ಕೋಮಲ್ ಜೊತೆಗೆ ಮಾತುಕತೆಯೂ ನಡೆದಿತ್ತು. ಆದರೆ ಅಷ್ಟರಲ್ಲಿ ಬಾರದ ಲೋಕಕ್ಕೆ ರಘು ಶೆಟ್ಟಿ ಪಯಣಿಸಿದ್ದಾರೆ. ರಘು ಶೆಟ್ಟಿ ನಿಧನಕ್ಕೆ ಕೋಸ್ಟಲ್ವುಡ್ ಕಂಬನಿ ಮಿಡಿದಿದೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!